ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವಂತ ಡಿನ್ನರ್ ಮೀಟಿಂಗ್ ದಿನಕ್ಕೊಂದು ತಿರುವು ಪಡೆಯುತ್ತಿವೆ. ಜಾರಕಿಹೊಳಿ ಡಿನ್ನರ್ ಪಾಲಿಟಿಕ್ಸ್ ಬಳಿಕ ವಿವಾದಕ್ಕೂ ಕಾರಣವಾಗುತ್ತಿವೆ. ಈ ಹಿನ್ನಲೆಯಲ್ಲಿ ನಾಳೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕರೆದಿದ್ದಂತ ಡಿನ್ನರ್ ಮೀಟಿಂಗ್ ರದ್ದುಗೊಳಿಸಲಾಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾಹಿತಿ ಬಿಡುಗಡೆ ಮಾಡಿದ್ದಾರೆ. ನಾಳೆ ಕಾಂಗ್ರೆಸ್ ಸಚಿವರು, ಶಾಸಕರಿಗೆ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಆದರೇ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಇದನ್ನು ರದ್ದುಗೊಳಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ಅವರ ಸೂಚನೆಯ ಮೇರೆಗೆ ರದ್ದುಗೊಳಿಸುತ್ತಿರುವುದಾಗಿ ಸ್ಪಷ್ಟ ಪಡಿಸಿದ್ದಾರೆ.
ಪೊಂಗಲ್ ಹಬ್ಬಕ್ಕೆ ಊರಿಗೆ ತೆರಳೋರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಸಂಚಾರ
GOOD NEWS: ಮಂಡ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಹೆಚ್ಚುವರಿ 2 ಗಂಟೆ ವಿದ್ಯುತ್ ಪೂರೈಕೆ