ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಲಿಂಕ್ ಗೃಹ ಸಚಿವ ಅರಗ ಜ್ಞಾನೇಂದ್ರ ತವರು ಕ್ಷೇತ್ರಕ್ಕೂ ನಂಟಿದೆ. ಈ ಹಿನ್ನಲೆಯಲ್ಲಿ ಗೃಹ ಸಚಿವರೇ ನಿಮ್ಮ ಮನೆಯ ಸುತ್ತಾಮುತ್ತಲೇ ಉಗ್ರರು ಅಡಗಿದ್ದಾರೆ ಎಂಬುದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಾಗ್ಧಾಳಿ ನಡೆಸಿದ್ದಾರೆ.
‘ಪಡಿತರ ಚೀಟಿದಾರ’ರಿಗೆ ಬಿಗ್ ಶಾಕ್ ; ಕೇಂದ್ರ ಸರ್ಕಾರ ಮಹತ್ವದ ಘೋಷಣೆ, ಆ ಎಲ್ಲ ‘ಕಾರ್ಡ್’ ರದ್ದು
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯೂ ಗೃಹ ಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯವನಾಗಿದ್ದಾರೆ. ಈ ಹಿಂದೆ ರಾಜ್ಯದಲ್ಲಿ ನಡೆದಂತ ಕೆಲ ಉಗ್ರ ಚಟುವಟಿಕೆಗಳಲ್ಲಿಯೂ ಬಂಧಿತರಾದಂತವರು ತೀರ್ಥಹಳ್ಳಿ ಮೂಲದವರಾಗಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ದೇಶದಲ್ಲಿ ಪಿಎಫ್ಐ ಸಂಘಟನೆ ಬ್ಯಾನ್ ಆದರೂ, ಮಾನಸಿಕವಾಗಿ ಬ್ಯಾನ್ ಆಗಿಲ್ಲ. ರಾಜ್ಯದ ಕರಾವಳಿ ಭಾಗದಲ್ಲಿ ಉಗ್ರರ ಕೃತ್ಯ ಹೆಚ್ಚುತ್ತಿದೆ. ಸರ್ಕಾರ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ, ಅದನ್ನು ನಿಯಂತ್ರಿಸೋ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು.