ತುಮಕೂರು : ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ಕ್ಷೇತ್ರದಲ್ಲಿ ಪುಂಡರು ಗಲಾಟೆ ನಡೆಸಿದ್ದು, ಕೇವಲ ದಾರಿ ಬಿಡಿ ಎಂದಿದಕ್ಕೆ ಯೋಧನ ಮೇಲೆ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಕ್ರಾಸ್ಬಳಿ ನಡೆದಿದೆ.
ಹೌದು, ಕೇವಲ ದಾರಿ ಬಿಡಿ ಎಂದಿದಕ್ಕೆ ಯೋಧನ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿದೆ. ಹಲ್ಲೆಗೆ ಒಳಗಾಗಿರುವ ಯೋಧನನ್ನು ಗೋವಿಂದರಾಜು (30) ಎಂದು ಹೇಳಲಾಗಿತ್ತಿದೆ. ಭರತ್, ಪುನೀತ್, ಗೌರಿಶಂಕರ, ಶಿವಾ, ದಿಲೀಪ್ ಯೋಧನ ಮೇಲೆ ಹಲ್ಲೆ ಮಾಡಿರುವ ಪುಂಡರು ಎಂದು ತಿಳಿದುಬಂದಿದೆ.
ಹಲ್ಲೆಗೆ ಒಳಗಾಗಿರುವ ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ ಭಾರತೀಯ ಭೂಸೇನೆ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.ರಜೆಯ ಮೇಲೆ ಊರಿಗೆ ಬಂದಿದ್ದು, ಬೈರೇನಹಳ್ಳಿ ಕ್ರಾಸ್ಗೆ ಬರುತ್ತಿದ್ದರು. ಈ ವೇಳೆ ದಾರಿ ಮಧ್ಯೆ ನಿಂತಿದ್ದವರಿಗೆ ಯೋಧ ಗೋವಿಂದರಾಜು ಅವರು ದಾರಿ ಬಿಡಿ ಎಂದಿದ್ದಾರೆ.
ಈ ವೇಳೆ ಕುಡಿದ ಮತ್ತಲ್ಲಿ ಐವರು ಮದ್ಯದ ಬಾಟಲಿಯಿಂದ ಯೋಧ ಗೋವಿಂದರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ತಕ್ಷಣ ಅವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನೆ ಕುರಿತಂತೆಆರೋಪಿಗಳ ವಿರುದ್ಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.