ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ

ದಾವಣಗೆರೆ: ಜಿಲ್ಲೆಯ ಆನಗೋಡು ಗ್ರಾಮದ ಬಳಿ ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ (ICU) ದಾಖಲಿಸಲಾಗಿದೆ. ಘಟನೆಯ ವಿವರ: ರಂಜಾನ್ ಹಬ್ಬದ ಅಂಗವಾಗಿ ಇಂದು ಮುಸ್ಲಿಂ ಬಾಂಧವರು ಆನಗೋಡು ಬಳಿಯ ಪ್ರಾರ್ಥನಾ ಸ್ಥಳದಲ್ಲಿ ಸಾಮೂಹಿಕ ನಮಾಜ್ ಸಲ್ಲಿಸುತ್ತಿದ್ದರು. ಈ ಸಂದರ್ಭದಲ್ಲಿ ಹತ್ತಿರದ ಮರವೊಂದರಲ್ಲಿದ್ದ ಹೆಜ್ಜೇನು ಗೂಡಿಗೆ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ ಎನ್ನಲಾಗಿದೆ. … Continue reading ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು ದಾಳಿ; 25ಕ್ಕೂ ಹೆಚ್ಚು ಜನರಿಗೆ ಗಾಯ, ಐವರ ಸ್ಥಿತಿ ಗಂಭೀರ