ಬೆಂಗಳೂರು: ಸದನದಲ್ಲೇ ಸಹಕಾರ ಸಚಿವ ಕೆಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಆರೋಪ ಪ್ರತಿಧ್ವನಿಸಿತ್ತು. ಈ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಯಾಗಿರುವಂತ ಪರಿಷತ್ ಸದಸ್ಯ ರಾಜೇಂದ್ರ ಅವರು, ದಾಖಲೆ ಸಹಿತ ಮಾಹಿತಿ ಸಲ್ಲಿಸಿದ್ದಾರೆ.
ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರ ಪುತ್ರ ಹಾಗೂ ಪರಿಷತ್ ಸದಸ್ಯ ರಾಜೇಂದ್ರ ಅವರು, ಹನಿಟ್ರ್ಯಾಪ್ ಯತ್ನ ಆರೋಪದ ದಾಖಲೆ ಸಹಿತ ಮಾಹಿತಿ ನೀಡಿದರು.
ಸಿಎಂ ಸಿದ್ಧರಾಮಯ್ಯ ಜೊತೆಗೂ ಕೆಲಕಾಲ ಈ ಸಂಬಂಧ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜೇಂದ್ರ ಅವರಿಗೆ ಸಿಎಂ ಸಿದ್ಧರಾಮಯ್ಯ ಕೆಲ ಸಲಹೆಗಳನ್ನು ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಸಲಹೆ ಮೇರೆಗೆ ಪರಿಷತ್ ಸದಸ್ಯ ರಾಜೇಂದ್ರ ಅವರು ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಆರೋಪದ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ.
ವಿಧಾನಸಭೆಯ ‘ವಿಪಕ್ಷ ನಾಯಕ ಆರ್.ಅಶೋಕ್’ ಮೇಲೆ ಕ್ರಮವೇಕಿಲ್ಲ?: ‘ಸ್ಪೀಕರ್’ಗೆ ‘ರಮೇಶ್ ಬಾಬು’ ಪತ್ರ
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence