ಬೆಂಗಳೂರು: ಸಚಿವರಿಗೆ ಹನಿಟ್ರ್ಯಾಪ್ ಮಾಡೋದಕ್ಕೆ ಮುಂದಾದಂತ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಹನಿಟ್ರ್ಯಾಪ್ ಕೇಸ್ ಅನ್ನು ನ್ಯಾಯಾಂಗ ಅಥವಾ ಸಿಬಿಐ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ನ್ಯಾಯಾಧೀಶರು, ಕೇಂದ್ರದ ನಾಯಕರ, ಸಚಿವರ ಹೆಸರು ತಂದಿದ್ದಾರೆ. ಇದರ ಜುಡಿಷಿಯಲ್ ತನಿಖೆ ಅಥವಾ ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು. ಕೇಂದ್ರದ ನಾಯಕರ ಫೋನ್ ಬಂತೆಂದು ಇದನ್ನು ಮುಚ್ಚಿ ಹಾಕುವ ಕೆಲಸವನ್ನು ಕಾಂಗ್ರೆಸ್ಸಿನವರು ಮಾಡಬಾರದು ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿಗಳು ತಾವು ಮುಸ್ಲಿಮರಿಗೆ ಶೇ 4 ಮೀಸಲಾತಿ ಪರ ಇರುವುದಾಗಿ, ಹಲಾಲ್ ಬಜೆಟ್ ಪರ ಇದ್ದೇನೆ ಎಂಬುದಾಗಿ ಹಾಗೂ ಮುಸ್ಲಿಮರಿಗೆ ರಾಜ್ಯವನ್ನೇ ಮಾರಿ ಬಿಡುತ್ತೇನೆ ಎಂದಿದ್ದಾರೆ. ಟೋಪಿ ಹಾಕಿಲ್ಲ ಎಂಬುದು ಬಿಟ್ಟರೆ ಸಿದ್ದರಾಮಯ್ಯನವರು ಮುಸಲ್ಮಾನರ ಬಜೆಟ್ ಮಂಡಿಸಿದ್ದಾರೆ ಎಂದು ಟೀಕಿಸಿದರು.
ಮುಸ್ಲಿಮರಿಗೆ ಮೀಸಲಾತಿ ವಿರುದ್ಧ ಬಿಜೆಪಿ- ಜೆಡಿಎಸ್ ಜನಾಂದೋಲನ: ಬಿವೈ ವಿಜಯೇಂದ್ರ
BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace