ಬೆಂಗಳೂರು: ಸಚಿವ ಕೆಎನ್ ರಾಜಣ್ಣಗೆ ಹನಿಟ್ರ್ಯಾಪ್ ಯತ್ನ ಆರೋಪದ ಸಂಬಂಧ ಸೋಮವಾರ ಅಥವಾ ಮಂಗಳವಾರ ರಾಜ್ಯ ಡಿಜಿ ಮತ್ತು ಐಜಿಪಿಗೆ ದೂರು ನೀಡಲು ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ನಿರ್ಧರಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ ಅವರಿಗೆ ಹನಿಟ್ರ್ಯಾಪ್ ಆರೋಪದ ಸಂಬಂಧ ದಾಖಲೆ ಸಹಿತ ಮಾಹಿತಿ ನೀಡಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸೋಮವಾರ ಅಥವಾ ಮಂಗಳವಾರ ಡಿಜಿ-ಐಜಿಪಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂದರು.
ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ ನಡೆಸಿದ್ದರು. ಹನಿಟ್ರ್ಯಾಪ್ ಸಂಬಂಧ ನಮ್ಮ ಮಧುಗಿರಿ ನಿವಾಸಕ್ಕೂ ಬಂದಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.
ಬೆಂಗಳೂರಿನ ಸರ್ಕಾರಿ ನಿವಾಸಕ್ಕೂ ಬಂದು ಹನಿಟ್ರ್ಯಾಪ್ ಯತ್ನ ನಡೆಸಲಾಗಿತ್ತು. ಈ ಎಲ್ಲಾದರ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದ್ದು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಲು ನಿರ್ಧರಿಸಿದ್ದೇನೆ ಎಂಬುದಾಗಿ ತಿಳಿಸಿದರು.
ಯಾರೆಂದು ಹೇಗೆ ಹೋಳೋದು? ತನಿಖೆಯಾಗಲಿ ಎಲ್ಲವೂ ಹೊರ ಬರುತ್ತದೆ. ನಮ್ಮ ತಂದೆಯಷ್ಟೇ ಅಲ್ಲ ಯಾರಿಗೂ ಈ ರೀತಿಯಾಗಿ ಆಗಬಾರದು. ಎಲ್ಲರ ಮನೆಯಲ್ಲೂ ಹೆಣ್ಣಮುಕ್ಕಳು ಇರ್ತಾರೆ ಅಲ್ವ? ಈ ರೀತಿ ಆದ್ರೇ ಹೇಗೆ.? ಪ್ರಕರಣದ ಬಗ್ಗೆ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಆಗಲಿ. ಡಿಜಿ-ಐಜಿಪಿಗೆ ದೂರು ನೀಡಿದ ಬಳಿಕ ದೆಹಲಿಗೆ ತೆರಳುವುದಾಗಿ ಹೇಳಿದರು.
ಥಿಯೇಟರ್‌ನಲ್ಲಿ IPL ಪಂದ್ಯಗಳ ಪ್ರಸಾರಕ್ಕೆ BCCIನೊಂದಿಗೆ ಪಿವಿಆರ್ ಐನಾಕ್ಸ್ ಒಪ್ಪಂದ | PVR-INOX