ದಾವಣಗೆರೆ : ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣ ಹಿನ್ನೆಲೆ ಚಂದ್ರಶೇಖರ್ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 302,201 ಹಾಗೂ 427 ರಡಿ ಪ್ರಕರಣ ದಾಖಲಾಗಿದ್ದು, ಮೃತ ದೇಹದ ಕೈ ಕಾಲುಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ದೂರಿನಲ್ಲಿ ಏನೇನಿದೆ..?
ಮೃತ ದೇಹದ ಕೈ ಕಾಲು ಬಟ್ಟೆಯಿಂದ ಕಟ್ಟಿ ಹಾಕಿದ್ದು, ಕಿವಿಗಳಿಗೆ ಹೊಡೆದಿರುವ ಗುರುತುಗಳು ಪತ್ತೆಯಾಗಿದೆ. ತಲೆಗೆ ಆಯುಧಗಳಿಂದ ಹೊಡೆದಿರುವ ಹಾಗೆ , ದೇಹದ ಉಳಿದ ಭಾಗದಲ್ಲಿ ಹೊಡೆದಿರುವ ಬಗ್ಗೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ. ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಅಪಘಾತದ ರೀತಿಯಲ್ಲಿ ಬಿಂಬಿಸಲಾಗಿದೆ. ಮೃತದೇಹವನ್ನು ಕಾರಿನಲ್ಲಿ ಇರಿಸಿ ಕಾರು ಜಖಂಗೊಳಿಸಿದ್ದಾರೆ ಎಂದು ರಮೇಶ್ ಎಫ್ ಐ ಆರ್ ದಾಖಲಿಸಿದ್ದಾರೆ.
ಚಂದ್ರಶೇಖರ್ ಅಂತ್ಯಕ್ರಿಯೆ
ಬಿಜೆಪಿ ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಅಂತ್ಯಕ್ರಿಯೆ ಇಂದು ಸ್ವಗ್ರಾಮ ಕುಂದೂರಿನ ತೋಟದಲ್ಲಿ ನೆರವೇರಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ತೋಟದಲ್ಲಿ ಚಂದ್ರಶೇಖರ್ ಅಂತ್ಯಕ್ರಿಯೆ ನೆರವೇರಿದ್ದು, ಚಂದ್ರಶೇಖರ್ ಮಣ್ಣಲ್ಲಿ ಮಣ್ಣಾದರು.
ಈ ವೇಳೆ ಶಾಸಕ ರೇಣುಕಾಚಾರ್ಯ, ಹಾಗೂ ಕುಟುಂಬದವರು, ಗೃಹ ಸಚಿವ ಆರಗ ಜ್ಞಾನೇಂದ್ರ, ಹೊನ್ನಾಳಿ ಹಿರೇಕಲ್ಮಠದ ಡಾ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಚಂದ್ರಶೇಖರ್ ಪಾರ್ಥೀವ ಶರೀರಕ್ಕೆ ಪೂಜೆ ಸಲ್ಲಿಸಿದ ಬಳಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸರತಿ ಸಾಲಿನಲ್ಲಿ ನಿಂತು ಭಾವುಕ ಮನಸ್ಸಿನಿಂದಲೇ ಸಾವಿರಾರು ಜನರು ದರ್ಶನ ಪಡೆದರು. ಹೊನ್ನಾಳಿ ಪಟ್ಟಣದ ಶಾಸಕ ರೇಣುಕಾಚಾರ್ಯರ ಮನೆಯಲ್ಲಿ ಚಂದ್ರಶೇಖರ್ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಹಿರೇಕಲ್ಮಠದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ ಪೂಜೆ ನೆರವೇರಿಸಿದರು. ಈ ವೇಳೆ ಚಂದ್ರು ಚಂದ್ರು ಅಂತಾ ರೇಣುಕಾಚಾರ್ಯರು ಬಿಕ್ಕಿ ಬಿಕ್ಕಿ ಅತ್ತರು.
BIGG NEWS : ‘ವೀರಶೈವ ಲಿಂಗಾಯತ’ ಸಂಪ್ರದಾಯದಂತೆ ಅಂತ್ಯಕ್ರಿಯೆ : ಮಣ್ಣಲ್ಲಿ ಮಣ್ಣಾದ ‘ಹೊನ್ನಾಳಿ ಚಂದ್ರಶೇಖರ್’
ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ : ಪಾಲಿಕೆ ಸದಸ್ಯರಿಗೆ ಸಿಎಂ ಬೊಮ್ಮಾಯಿ ಸನ್ಮಾನ