ದಾವಣಗೆರೆ : ನನ್ನ ಮಗನಿಗೆ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ ಎಂದು ಮೃತ ಚಂದ್ರಶೇಖರ್ ತಂದೆ ರಮೇಶ್ ಕಣ್ಣೀರಿಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಮೇಶ್ ನನ್ನ ಮಗನ ಮರ್ಮಾಂಗ ಊದಿಕೊಂಡಿತ್ತು. ಅದಕ್ಕೆ ಇಂಜೆಕ್ಷನ್ ಮಾಡಿದ್ದಾರೆ. ನನ್ನ ಮಗನಿಗೆ ಚಿತ್ರಹಿಂಸೆ ಕೊಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನನ್ನ ಮಗನ ಕೊಲೆಗೆ ಮೊದಲೇ ಸಂಚು ರೂಪಿಸಲಾಗಿತ್ತು, ನನ್ನ ಮಗನದ್ದು ವ್ಯವಸ್ಥಿತ ಕೊಲೆ ಎಂದು ಆರೋಪಿಸಿದ್ದಾರೆ.
ಮನೆಯಿಂದ ಹೋಗುವಾಗ ಒಳ ಉಡುಪು ಇತ್ತು. ಆದರೆ ಮರಣೋತ್ತರ ಪರೀಕ್ಷೆ ಮಾಡುವಾಗ ಒಳ ಉಡುಪು ಇರಲಿಲ್ಲ, ಅಲ್ಲದೇ ಮರ್ಮಾಂಗ ಬಾತುಕೊಂಡಿತ್ತು, ಅದಕ್ಕೆ ಇಂಜೆಕ್ಷನ್ ಕೊಟ್ಟು ಚಿತ್ರಹಿಂಸೆ ನೀಡಿದ್ದಾರೆ. ನನ್ನ ಮಗನ ಕೊಲೆಗೆ ಮೊದಲೇ ಸಂಚು ರೂಪಿಸಲಾಗಿತ್ತು, ನನ್ನ ಮಗನದ್ದು ವ್ಯವಸ್ಥಿತ ಕೊಲೆ, ಬೇರೆ ಕಡೆ ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿದ್ದಾರೆ ಎಂದು ರಮೇಶ್ ಕಣ್ಣೀರಿಟ್ಟಿದ್ದಾರೆ.
ಘಟನೆ ಹಿನ್ನೆಲೆ ಚಂದ್ರಶೇಖರ್ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ (FIR) ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302,201 ಹಾಗೂ 427 ರಡಿ ಪ್ರಕರಣ ದಾಖಲಾಗಿದ್ದು, ಮೃತ ದೇಹದ ಕೈ ಕಾಲುಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ಮೃತ ದೇಹದ ಕೈ ಕಾಲು ಬಟ್ಟೆಯಿಂದ ಕಟ್ಟಿ ಹಾಕಿದ್ದು, ಕಿವಿಗಳಿಗೆ ಹೊಡೆದಿರುವ ಗುರುತುಗಳು ಪತ್ತೆಯಾಗಿದೆ. ತಲೆಗೆ ಆಯುಧಗಳಿಂದ ಹೊಡೆದಿರುವ ಹಾಗೆ , ದೇಹದ ಉಳಿದ ಭಾಗದಲ್ಲಿ ಹೊಡೆದಿರುವ ಬಗ್ಗೆ ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ. ನನ್ನ ಮಗನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ, ಅಪಘಾತದ ರೀತಿಯಲ್ಲಿ ಬಿಂಬಿಸಲಾಗಿದೆ. ಮೃತದೇಹವನ್ನು ಕಾರಿನಲ್ಲಿ ಇರಿಸಿ ಕಾರು ಜಖಂಗೊಳಿಸಿದ್ದಾರೆ ಎಂದು ರಮೇಶ್ ಎಫ್ ಐ ಆರ್ ದಾಖಲಿಸಿದ್ದರು.
ಗರ್ಭ ಧರಿಸುವ, ನಿರಾಕರಿಸುವ ಹಕ್ಕು ಮಹಿಳೆಗೆ ಇದೆ: 26 ವಾರಗಳ ಗರ್ಭಪಾತಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿದ ಹೈಕೋರ್ಟ್