ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಬಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.
ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಮಂತ್ರಿಯಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬದಲಾವಣೆ ತರಬೇಕು, ಶಿಸ್ತು ತರಬೇಕು ಅಂತ ಕೆಲಸ ಮಾಡುತ್ತಿರುವೆ. ಎಲ್ಲರ ಸಹಕಾರದಿಂದ ಇಂದು ನಮ್ಮ ಇಲಾಖೆ ಮನೆ ಮನೆಗೆ ಹೆಸರಾಗಿದೆ. ಮೊದಲು ಕೆಡಿಪಿ ಸಭೆಗಳಲ್ಲಿ ನಮ್ಮ ಇಲಾಖೆ ಚರ್ಚೆ ಕೊನೆಯಲ್ಲಿ ಇರುತ್ತಿತ್ತು, ಈಗ ಗೃಹಲಕ್ಷ್ಮಿ ಯೋಜನೆ ಬಂದ್ಮೇಲೆ ಮೊದಲ ಸ್ಥಾನದಲ್ಲಿದೆ ಎಂದರು.
ಎಫ್ ಆರ್ ಎಸ್ ಸಿಸ್ಟಮ್ ನಲ್ಲಿ ಶೇಕಡ 99ರಷ್ಟು ಜಾರಿಗೆ ತಂದ ಕೀರ್ತಿ ತುಮಕೂರಿಗೆ ಸಲ್ಲುತ್ತದೆ. ಕರ್ನಾಟಕ ಯಾವತ್ತು ಮಾಡೆಲ್ ಆಗಿಯೇ ಕೆಲಸ ಮಾಡುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಕಾರಣ. ತುಮಕೂರಿನಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ನಾಲ್ಕು ಷೇರುದಾರರನ್ನು ನೋಂದಾಯಿಸಬೇಕು ಎಂದು ಸಚಿವರು ಕರೆ ನೀಡಿದರು.
ನಮ್ಮ ಇಲಾಖೆ ಸಾಮಾಜಿಕ ಬದ್ಧತೆಯ ಜೊತೆಗೆ ಮನುಷ್ಯತ್ವವನ್ನು ಕೊಡುತ್ತದೆ. ಅನುಕಂಪದಿಂದ ಹೃದಯದಿಂದ ಕೆಲಸ ಮಾಡುತ್ತೇವೆ, ಅದಕ್ಕಾಗಿ ಮಹಿಳೆಯರಿಗೆ ಈ ಇಲಾಖೆಯನ್ನು ಕೊಡಲಾಗಿದೆ. ಕೇಂದ್ರದಲ್ಲಿ ಎನ್ ಡಿಎ ಸರ್ಕಾರವಿದ್ದರೂ ಕೇಂದ್ರದಿಂದ ಅತಿಹೆಚ್ಚು ಅನುದಾನ ತಂದಿರುವುದು ನಾನು. ಪ್ರತಿಯೊಂದು ಗ್ರಾಮದಲ್ಲಿ ಅಂಗನವಾಡಿ ಕಟ್ಟಡಗಳನ್ನು ಕಟ್ಟಲಾಗಿದೆ ಎಂದರು.
ಕುಲದೇವತೆಯ ಗುಡಿಯಲ್ಲಿ ಈ ಒಂದು ದೀಪವನ್ನು ಹಚ್ಚಿ, ನಿಮ್ಮ ಎಲ್ಲಾ ಕಾರ್ಯಗಳ ಅಡೆತಡೆ ದೂರ
ಪ್ರಿಯಾಂಕ್ ಖರ್ಗೆ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮ: ಛಲವಾದಿ ನಾರಾಯಣಸ್ವಾಮಿ








