ಬೆಂಗಳೂರು : ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ.
ಹೌದು, ಈ ಹಿನ್ನೆಲೆ ಕೆಪಿಸಿಸಿ ವತಿಯಿಂದ ನವೆಂಬರ್ 6 ರಂದು ಬೃಹತ್ ಅಭಿನಂದನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ನಾಮಕರಣ ಮಾಡಲಾಗಿದೆ.
ಈ ಕುರಿತು ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾವೇಶ ನಡೆಸಲಿದ್ದೇವೆ, . ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದೇವೆ. ನವೆಂಬರ್ 6 ರಂದು ಬೆಳಗ್ಗೆ 10 ಖರ್ಗೆ ಆಗಮಿಸಲಿದ್ದಾರೆ ಎಂದರು.
ಬೆಂಗಳೂರು ವಿಮಾನ ನಿಲ್ದಾಣದ ಬಳಿಯೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತ ಕೋರಲಿದ್ದು, ಅದೇ ದಿನ ಮಧ್ಯಾಹ್ನ 2 ಕ್ಕೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದರು.
ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆ. ಪಕ್ಷದ ರಾಜ್ಯ ಘಟಕದ ವತಿಯಿಂದ ಅರಮನೆ ಮೈದಾನದಲ್ಲಿ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ರಾಜ್ಯ ಕಾಂಗ್ರೆಸ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದು, ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ. ನೂತನವಾಗಿ ಎಐಸಿಸಿ ಅಧ್ಯಕ್ಷ ಪಟ್ಟ ಏರಿದ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ನವೆಂಬರ್ 6ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ವಿಚ್ಛೇದನ ಕೋರಿದ ಮುಸ್ಲಿಂ ಮಹಿಳೆಗೆ ಪತಿಯ ಅನುಮತಿ ಅಗತ್ಯವಿಲ್ಲ: ಹೈಕೋರ್ಟ್