BREAKING: ಶಿವಮೊಗ್ಗದ ಆನಂದಪುರದಲ್ಲಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಹಲವರಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಗಿಳಾಲಗುಂಡಿ ಕ್ರಾಸ್ ಬಳಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಖಾಸಗಿ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್‌ನಲ್ಲಿದ್ದ ಪ್ರಯಾಣಿಕರು ಆತಂಕದಿಂದ ಕಿರುಚಾಡಿದ್ದಾರೆ. ಅದೃಷ್ಟವಶಾತ್, ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ … Continue reading BREAKING: ಶಿವಮೊಗ್ಗದ ಆನಂದಪುರದಲ್ಲಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಹಲವರಿಗೆ ಗಾಯ