ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ.
ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟಿçÃಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟಿçÃಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.
ಈ ಮೇಲ್ಕಂಡ ಯೋಜನೆಗಳಿಗೆ ಆಯಾ ಯೋಜನೆಗಳಲ್ಲಿ ನಿಗಧಿಪಡಿಸಿದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಎಲ್ಲಾ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅತೀ ಸಣ್ಣ ರೈತರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ನಮೂನೆ, ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
NEET-PG-2024 ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಗಮನಕ್ಕೆ: ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!