ಬೆಂಗಳೂರು: ನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅಲ್ಲದೇ ಮೃತರಾದಂತವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಕಾಂಪೌಂಡ್ ಗೋಡೆ ಕುಸಿತಕ್ಕೆ ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಬೀದಿ ಬದಿಯ ವ್ಯಾಪಾರಿಗಳು ಮಳೆಯಿಂದಾಗಿ ಕಾಂಪೌಂಡ್ ಗೋಡೆಯ ಬಳಿಯಲ್ಲಿ ಆಶ್ರಯ ಪಡೆದುಕೊಳ್ಳಲು ನಿಂತಿದ್ದರು. ಈ ಸಂದರ್ಭದಲ್ಲಿ ಕುಸಿತಗೊಂಡು ದುರ್ಘಟನೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರವನ್ನು ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಕೇರಳದಲ್ಲಿ ಯುಡಿಎಫ್‌ಗೆ ಅಧಿಕಾರ ಭಾಗ್ಯ? 10 ವರ್ಷಗಳ ಬಳಿಕ ಕಾಂಗ್ರೆಸ್ ಮೈತ್ರಿಕೂಟದ ಭರ್ಜರಿ ಕಮ್‌ಬ್ಯಾಕ್ ಮುನ್ಸೂಚನೆ!
ಲಿಂಗಧಾರಣೆ ಸಾಲದು, ನಿತ್ಯ ಪೂಜೆಯ ಸಂಸ್ಕಾರ ಬೇಕು: ಸೊರಬದ ಕ್ಯಾಸನೂರಿನಲ್ಲಿ ಶ್ರೀಶೈಲ ಜಗದ್ಗುರುಗಳ ಸಂದೇಶ








