ಬೆಂಗಳೂರು : ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಭಾರಿ ಹೈಡ್ರಾಮಾ ಮಾಡಿದ್ದು, ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ವರದಿಯಾಗಿದೆ.
ಪರಪ್ಪನ ಅಗ್ರಹಾರ ಜೈಲಿಗೆನಲ್ಲಿ ಕೈದಿಗಳಿಗೆ ರಾಜಾತಿತ್ಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಸ್ ಬಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಎಸ್ಪಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ್ದಾರೆ ತಕ್ಷಣ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಠಾಣೆಗೆ ಕರೆದೋಯ್ದಿದ್ದಾರೆ.








