ಬೆಂಗಳೂರು : ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಬಳಿ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೋಗಿಲೆ ಲೇಔಟ್ ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಭೇಟಿ ನೀಡಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ ಕೋಸಂಬೇ ಭೇಟಿ ನೀಡಿದ್ದಾರೆ. ಸಂತ್ರಸ್ತರಿಂದ ಆಯೋಗದ ಅಧ್ಯಕ್ಷ ಮಾಹಿತಿ ಸಂಗ್ರಹಿಸಿದ್ದಾರೆ. ಡಿಸೆಂಬರ್ 22 ರಿಂದ 24ರ ವರೆಗೆ ಸಂತ್ರಸ್ತರನ್ನು ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದಾರೆ.
ಬೆಂಗಳೂರಿನ ಶ್ರೀನಿವಾಸಪುರದ ಕೋಗಿಲು ಲೇಔಟ್ ನಲ್ಲಿ ಮನೆಗಳ ತೆರವು ಮಾಡಿದ್ದು ಅನೇಕ ವರ್ಷಗಳಿಂದ ನೆಲೆಸಿರುವ ನೂರಾರು ಮುಸ್ಲಿಂ ಕುಟುಂಬಗಳು ಇದೀಗ ಬೀದಿಗೆ ಬಂದಿವೆ. ಸಂತ್ರಸ್ಥರನ್ನು ಭೇಟಿಯಾಗಿ ಅಧ್ಯಕ್ಷ ಶಶಿಧರ್ ಕೋಸಂಬೇ ಧೈರ್ಯ ತುಂಬಿದ್ದರೆ. 18 ವರ್ಷದ ಒಳಗಿನ ಮಕ್ಕಳಿಗೆ ಸಂಕಷ್ಟ ಎದುರಾಗಿದೆ. ಮಕ್ಕಳ ಆರೋಗ್ಯ ಶಿಕ್ಷಣ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ ತುರ್ತು ಕ್ರಮ ಪುನರ್ವಸತಿ ಕಲ್ಪಿಸುವಂತೆ ಸ್ಥಳದಲ್ಲಿ ಇದ್ದಂತಹ ಅಧಿಕಾರಿಗಳಿಗೆ ಶಶಿಧರ ಸೂಚನೆ ನೀಡಿದ್ದಾರೆ.








