ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಮುಕ್ತಾಯಗೊಂಡಿದೆ. ಇಂದಿನವರೆಗೆ ಎಷ್ಟು ಸಮೀಕ್ಷೆ ನಡೆಸಲಾಗಿದೆ ಎನ್ನುವ ಅಂಕಿ ಅಂಶ ಮುಂದಿದೆ ಓದಿ.
ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ ಪ್ರಾರಂಭಿಸಲಾಗಿದ್ದು, ದಿನಾಂಕ 31.10.2025 ಮುಕ್ತಾಯಗೊಂಡಿರುತ್ತದೆ ಎಂದಿದೆ.
ಹೀಗಿದೆ ಸಮೀಕ್ಷೆಯ ಸಂಕ್ಷಿಪ್ತ ವಿವರ
Projected Population of Karnataka-2025 – 6,85,38,000
Surveyed Population till 31.10.2025 – 6,13,83,908
Refused Households – 4,22,258
Vacant/Locked Houses – 34,49,681
ವಿವಿಧ ಕಾರಣಗಳಿಂದಾಗಿ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಅವಕಾಶ ನೀಡುವ ಹಿನ್ನೆಲೆಯಲ್ಲಿ Online ಮೂಲಕ https://kscbcselfdeclaration.karnataka.gov.in ಲಿಂಕ್ ಬಳಸಿಕೊಂಡು ಸಮೀಕ್ಷೆಯಲ್ಲಿ ಸ್ವಯಂ ಪಾಲ್ಗೊಳ್ಳುವ ಅವಧಿಯನ್ನು ದಿನಾಂಕ:10.11.2025 ರ ವರೆಗೆ ಅಂತಿಮವಾಗಿ ವಿಸ್ತರಿಸಲಾಗಿದೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ನಿರಾಕರಿಸಿದವರು, ಸಮೀಕ್ಷಾದಾರರು ಮನೆಗೆ ಭೇಟಿ ನೀಡಿದಾಗ ಲಭ್ಯವಿಲ್ಲದವರು ಸಹ ಸದರಿ ಅವಕಾಶವನ್ನು ಬಳಸಿಕೊಂಡು ಮಾಹಿತಿಯನ್ನು ದಾಖಲಿಸಬಹುದಾಗಿದೆ. ಸದರಿ ಸಮೀಕ್ಷೆಯಿಂದ ಸರ್ಕಾರದ ನೀತಿಗಳನ್ನು ಹಾಗೂ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುವ ಕಾರಣ ಸ್ವಯಂ ದೃಢೀಕರಣದ ಮೂಲಕ ಎಲ್ಲಾ ನಾಗರಿಕರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಈ ಮೂಲಕ ಕೋರಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದಾಗಿದೆ ಎಂಬುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

GOOD NEWS: ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್‌ನ್ಯೂಸ್: ಪರಿಷ್ಕೃತ ನಕ್ಷೆ ಪಡೆಯಲು ರಾಜ್ಯ ಸರ್ಕಾರ ಅಸ್ತು
‘ಗ್ರಾಮ ಪಂಚಾಯ್ತಿ ಚುನಾವಣೆ’ಗೆ ‘ನಾಮಪತ್ರ’ದೊಂದಿಗೆ ಸಲ್ಲಿಸಲು ಈ ‘ದಾಖಲೆ’ಗಳು ಕಡ್ಡಾಯ
 
		



 




