ಹೊಸಪೇಟೆ: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಎಷ್ಟು ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಟ್ಟ ಲೆಕ್ಕ ಮುಂದಿದೆ ಓದಿ.
ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ. ಅನ್ನಭಾಗ್ಯ, ಯುವನಿಧಿ ಗ್ಯಾರಂಟಿಗಳನ್ನೂ ನೀಡಿದ್ದೇವೆ.
– ಮುಖ್ಯಮಂತ್ರಿ… pic.twitter.com/ynkkOKFnRQ
— CM of Karnataka (@CMofKarnataka) May 20, 2025
1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ. ಅನ್ನಭಾಗ್ಯ, ಯುವನಿಧಿ ಗ್ಯಾರಂಟಿಗಳನ್ನೂ ನೀಡಿದ್ದೇವೆ ಎಂಬುದಾಗಿ ತಿಳಿಸಿದರು.
2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.
ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.
BIG NEWS : ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ : ಅರ್ಜಿ ತಿದ್ದುಪಡಿಗೆ ಅವಕಾಶ ನೀಡಿದ ಹೈಕೋರ್ಟ್