ಬೆಂಗಳೂರು: ಬಿಜೆಪಿ ಸರ್ಕಾರದ ( BJP Government ) ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಕೆಲವರು ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ. ಬಿಜೆಪಿ ನಾಯಕರ ಹಣದಾಸೆಗೆ ಇಂಥಾ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು? ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಕಿಡಿಕಾರಿದ್ದಾರೆ.
ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಹಲವರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ, ಇನ್ನು ಕೆಲವರು ದಯಾಮರಣ ಕೋರಿ ಅರ್ಜಿ ಹಾಕಿದ್ದಾರೆ.@BJP4Karnataka ನಾಯಕರ ಹಣದಾಸೆಗೆ ಇಂಥಾ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು? 7/7
— Siddaramaiah (@siddaramaiah) January 3, 2023
ಈ ಬಗ್ಗೆ ಇಂದು ಸರಣಿ ಟ್ವಿಟ್ ಮಾಡಿರುವಂತ ಅವರು, ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಉದ್ಯಮಿ ಪ್ರದೀಪ್ ಅವರ ಆತ್ಮಹತ್ಯೆ ದುರದೃಷ್ಟಕರ. ಅವರ ಆತ್ಮಹತ್ಯೆಗೆ ಕಾರಣರಾದ ಶಾಸಕ ಅರವಿಂದ ಲಿಂಬಾವಳಿ ಸಹಿತ ಇತರೆ ಎಲ್ಲಾ ಆರೋಪಿಗಳನ್ನು ಈ ಕೂಡಲೇ ಬಂಧಿಸಿ, ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ. 1/7 pic.twitter.com/SmvtzjZdxX
— Siddaramaiah (@siddaramaiah) January 3, 2023
ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದಿದ್ದಾರೆ.
ದಿವಂಗತ ಪ್ರದೀಪ್ ಅವರು ಉದ್ಯಮವೊಂದಕ್ಕೆ ಸುಮಾರು 1.5 ಕೋಟಿ ರೂಪಾಯಿ ಬಂಡವಾಳ ಹೂಡಿದ್ದರು, ಆದರೆ ಈ ವರೆಗೆ ನಯಾಪೈಸೆ ಲಾಭದ ಹಣ ಅವರ ಕೈಸೇರಿಲ್ಲ. ಈ ವಿವಾದದಲ್ಲಿ ಶಾಸಕ ಅರವಿಂದ ಲಿಂಬಾವಳಿ ಅವರು ಮಧ್ಯಸ್ಥಿಕೆ ವಹಿಸಿದ್ದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. 2/7
— Siddaramaiah (@siddaramaiah) January 3, 2023
ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಾಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ. ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ತನ್ನ ಪತಿಯ ಸಾವಿಗೆ ನ್ಯಾಯ ಸಿಗಬೇಕು ಮತ್ತು ಸಾಲಮಾಡಿ ಹೂಡಿಕೆ ಮಾಡಿದ್ದ ಹಣವನ್ನು ವಾಪಾಸು ಕೊಡಿಸಬೇಕು ಎಂಬುದು ಮೃತನ ಪತ್ನಿ ನಮಿತಾ ಅವರ ಮನವಿ.
ಪೊಲೀಸ್ ಇಲಾಖೆ ತಕ್ಷಣ ಕ್ರಮವಹಿಸಿ, ಈ ಹಣವನ್ನು ವಾಪಾಸು ಕೊಡಿಸುವ ಕೆಲಸ ಮಾಡಬೇಕು. 3/7— Siddaramaiah (@siddaramaiah) January 3, 2023
ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ? ಎಂದಿದ್ದಾರೆ.
ಡೆತ್ ನೋಟ್ ನಲ್ಲಿ ಆಡಳಿತದ ಪಕ್ಷದ ಶಾಸಕರ ಹೆಸರಿದೆ ಎಂಬ ಕಾರಣಕ್ಕೆ ಪೊಲೀಸರು ಅಪರಾಧಿಗಳನ್ನು ಬಂಧಿಸದಿದ್ದರೆ ಅವರು ಸಾಕ್ಷ್ಯನಾಶ ಮಾಡುವ ಸಾಧ್ಯತೆಗಳಿರುತ್ತದೆ. ಹೀಗಾದಾಗ ಅನ್ಯಾಯಕ್ಕೊಳಗಾದ ಕುಟುಂಬಕ್ಕೆ ನ್ಯಾಯ ಸಿಗಲು ಸಾಧ್ಯವೇ? 4/7
— Siddaramaiah (@siddaramaiah) January 3, 2023
ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ? ಎಂದು ಗುಡುಗಿದ್ದಾರೆ.
ಪೊಲೀಸರು ಮೃತನ ಮೊಬೈಲ್ ಕೊಡಿ ಎಂದು ಮಧ್ಯರಾತ್ರಿಯಲ್ಲಿ ಕುಟುಂಬದವರ ಬಳಿ ಬಂದು ಕೇಳಿದ್ದಾರೆ. ಸಾವಿಗೂ ಮುನ್ನ ಪ್ರದೀಪ್ ಅವರು ಬರೆದ ಡೆತ್ ನೋಟ್ ನಲ್ಲಿ ಸಾವಿಗೆ ಕಾರಣರಾದವರ ಹೆಸರು ಸ್ಪಷ್ಟವಾಗಿರುವಾಗ ತನಿಖೆಯನ್ನು ಬೇರೆ ಆಯಾಮಗಳಿಗೆ ತಿರುಗಿಸುವ ಅಗತ್ಯವೇನಿದೆ? 5/7
— Siddaramaiah (@siddaramaiah) January 3, 2023
ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ. ತನಿಖೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಾಗ ಸೂಕ್ತ ತನಿಖೆ ನಡೆಸದೆ ಪ್ರಕರಣವನ್ನು ಮುಚ್ಚಿಹಾಕಲಾಗಿದೆ. ಈ ಪ್ರಕರಣವು ಅದೇ ರೀತಿ ಆಗುವುದು ಬೇಡ.
ತನಿಖೆಯಲ್ಲಿ ರಾಜ್ಯ @BJP4Karnataka ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಒತ್ತಾಯ ಮಾಡುತ್ತೇನೆ. 6/7— Siddaramaiah (@siddaramaiah) January 3, 2023