ಬೆಂಗಳೂರು: ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
‘ಆಹಾರ-ಆರೋಗ್ಯ ಪ್ರಿಯ’ರಿಗೆ ಸುವರ್ಣಾವಕಾಶ: ನ.20ರಂದು ಯಲಹಂಕದಲ್ಲಿ ‘ವಿಶಿಷ್ಟ ಆಹಾರ ಮೇಳ- ಪ್ರಾತ್ಯಕ್ಷಿಕೆ’
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ಹತ್ತಿರವಾದಂತೆ ಕ್ಷುಲ್ಲಕ ವಿಚಾರಗಳನ್ನೆತ್ತಿ ಆರೋಪ ಮಾಡುವುದನ್ನು, ಸುಳ್ಳು ಆಪಾದನೆ ಮಾಡುವುದನ್ನು ಕಾಂಗ್ರೆಸ್ ನಾಯಕರು ಕರಗತ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, 130 ಕೋಟಿ ರೂ. ಖರ್ಚು ಮಾಡಿ ಜಾತಿ ಗಣತಿ ಮಾಡಲಾಗಿತ್ತು. ಆ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದೆ ಕಾಂಗ್ರೆಸ್ ಅಭ್ಯರ್ಥಿಗಳ ಬಳಿ ಮಾತ್ರ ಹಂಚಿಕೊಳ್ಳಲಾಗಿತ್ತು. ಇದನ್ನು ನಾನು ಬೇಕಿದ್ದರೆ ಶೇರ್ ಮಾಡುತ್ತೇನೆ. ಜಾತಿ ಗಣತಿಯನ್ನು ಗೌಪ್ಯವಾಗಿ ಎಲ್ಲಾ ಜಿಲ್ಲೆಗಳಲ್ಲಿ ಅವರಿಗೆ ಬೇಕಾದವರಿಗೆ ಸೋರಿಕೆ ಮಾಡಲಾಗಿದೆ. ಇದರ ಹೊಣೆಗಾರಿಕೆಯನ್ನು ಕಾಂಗ್ರೆಸ್ ನಾಯಕರು ಹೊರುತ್ತಾರೆಯೇ ಎಂದು ಪ್ರಶ್ನೆ ಮಾಡಿದರು.
ಚುನಾವಣಾ ಆಯೋಗದ ಮೂಲಕ ನಗರ ಪಾಲಿಕೆಗಳು ಎನ್ಜಿಒಗೆ ಕೆಲವು ಕೆಲಸಗಳನ್ನು ನೀಡುವುದು ನಿರಂತರವಾಗಿ ನಡೆದುಕೊಂಡೇ ಬಂದಿದೆ. ಕಾನೂನಿನ ಪರಿಮಿತಿಯಲ್ಲೇ ಈ ಕೆಲಸ ನಡೆಯುತ್ತದೆ. ನಿಯಮ ಪಾಲಿಸದೇ ಇದ್ದಲ್ಲಿ ಆ ಸಂಸ್ಥೆ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇದನ್ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಷ್ಟಕ್ಕೇ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಲಾಗುತ್ತಿದೆ. ಹಾಗಾದರೆ ಜಾತಿ ಗಣತಿ ವರದಿಯ ಸೋರಿಕೆಗಾಗಿ ವಿರೋಧ ಪಕ್ಷಗಳ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಚಿವರು ಪ್ರಶ್ನೆ ಮಾಡಿದರು.
BIGG NEWS : ‘ಪಂಚರತ್ನ’ ಸಮಾವೇಶದಲ್ಲಿ ‘ಜೆಡಿಎಸ್’ ಸೋಲಿಗೆ ಕಾರಣ ಬಿಚ್ಚಿಟ್ಟ H.D ಕುಮಾರಸ್ವಾಮಿ |JDS Pancharatna
ಯಾವುದಾದರೂ ತಾರ್ಕಿಕವಾದ ವಿಷಯಗಳನ್ನು ಇಟ್ಟುಕೊಂಡು ಮಾತನಾಡಬೇಕು. ಆದರೆ ಕಾಂಗ್ರೆಸ್ ನಾಯಕರು ಕ್ಷುಲ್ಲಕ ವಿಷಯಗಳನ್ನು ಇಟ್ಟುಕೊಂಡು ಮಾತನಾಡಿ ಜನರ ಮುಂದೆ ಬೆತ್ತಲಾಗುತ್ತಿದ್ದಾರೆ. ಅವರು ಉತ್ಪ್ರೇಕ್ಷೆ ಮಾಡಿ ಮಾತನಾಡಿದ್ದಾರೆ. ಆದರೆ ಮುಖ್ಯಮಂತ್ರಿಗಳು ಈಗಾಗಲೇ ತನಿಖೆಗಾಗಿ ಕಾನೂನಿನ ಸಲಹೆ ಪಡೆಯಲು ಸೂಚಿಸಿದ್ದಾರೆ. ಕಾನೂನು ಸಲಹೆಯಂತೆ ಸರ್ಕಾರ ಕ್ರಮ ವಹಿಸಲಿದೆ. ಈ ರೀತಿಯ ರಾಜಕೀಯ ಹುನ್ನಾರ ಮಾಡುವುದು ಬಿಜೆಪಿಯ ಇತಿಹಾಸದಲ್ಲೇ ಇಲ್ಲ. ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ನಡೆಯುತ್ತಿರುವುದರಿಂದ ಇಂತಹ ವಿಷಯಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಜನರ ಮುಂದೆ ಹೋಗುತ್ತಿದೆ ಎಂದರು.