ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ವೈಯಕ್ತಿಕ ಕೃಷಿ ಹೊಂಡ, ಪ್ಯಾಕ್ ಹೌಸ್ ನಿರ್ಮಾಣ, ಹಸಿರುಮನೆ ನೆರಳುಪರದೆ ನಿರ್ಮಾಣ, ಪ್ರಾರ್ಥಮಿಕ ಸಂಸ್ಕರಣೆ ಘಟಕ ನಿರ್ಮಾಣಕ್ಕಾಗಿ ಸೌಲಭ್ಯವನ್ನು ಪಡೆಯಲು ಅರ್ಹ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ರೈತರು ನಿಗಧಿತ ನಮೂನೆ ಅರ್ಜಿಯನ್ನು ಆಯಾ ತಾಲೂಕು ತೋಟಗಾರಿಕೆ ಇಲಾಖೆಯಲ್ಲಿ ಫೆ. 27 ರೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ತೀರ್ಥಹಳ್ಳಿ ತಾಲೂಕು ಕುಶಾವತಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಅಥವಾ ಕಚೇರಿ ದೂ.ಸಂ.: 08181-228151 ನ್ನು ಸಂಪರ್ಕಿಸುವುದು.