ಬೆಂಗಳೂರು : ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಬಾಲ ಸ್ವಾಸ್ಥ್ಯ (RBSK)ಕಾರ್ಯಕ್ರಮದಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆರ್‌ಬಿಎಸ್‌ಕೆ ಮೊಬೈಲ್ ಹೆಲ್ತ್ ತಂಡಗಳ ಮುಖಾಂತರ ಉಚಿತವಾಗಿ ಆರೋಗ್ಯ ತಪಾಸಣೆಯನ್ನು ನಡೆಸಲಾಗಿದ್ದು, 2025-26ನೇ ಸಾಲಿಗೆ ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಒಟ್ಟು 52,02,647 ಹೆಣ್ಣು ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು.… pic.twitter.com/6MgL3a2xBZ
— DIPR Karnataka (@KarnatakaVarthe) January 23, 2026








