Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಡ್ರೀಮ್ ಲೈನರ್ ಅತ್ಯಂತ ಸುರಕ್ಷಿತ ವಿಮಾನ’ : ‘ಸಂಸದೀಯ ಸಮಿತಿ’ಗೆ ‘ಏರ್ ಇಂಡಿಯಾ’ ಉತ್ತರ

08/07/2025 4:56 PM

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಪ್ಪು ಹೆಸರಿನಲ್ಲಿ ‘ಹೃದಯ ಜ್ಯೋತಿ’ ಯೋಜನೆ ಜಾರಿ: ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್!
KARNATAKA

ಅಪ್ಪು ಹೆಸರಿನಲ್ಲಿ ‘ಹೃದಯ ಜ್ಯೋತಿ’ ಯೋಜನೆ ಜಾರಿ: ಹೃದಯಾಘಾತದಿಂದ ಸಾವು ತಡೆಗೆ ಸಿಗಲಿದೆ ಇಂಜಕ್ಷನ್!

By kannadanewsnow0916/03/2024 5:15 AM

ಬೆಂಗಳೂರು: ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.

ಹಠಾತ್ ಹೃದಯಾಘತಗಳನ್ನ ತಡೆಯಲು ಈ ಯೋಜನೆ ಮಹತ್ವದ್ದಾಗಿದೆ. ಯಾರಿಗೇ ಎದುನೋವು ಕಾಣಿಸಿಕೊಂಡಾಗ ನಿರ್ಲಕ್ಷ್ಯೆ ಮಾಡದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಇಸಿಜಿ ಮಾಡಿಸಿಕೊಳ್ಳಿ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ತಾಲೂಕು ಮಟ್ಟದ ಆಸ್ಪತ್ರೆಗಳಲ್ಲೇ ಹಠಾತ್ ಹೃದಯಘಾತ ಆಗದಂತೆ ಜೀವರಕ್ಷಕ ಚುಚ್ಚುಮದ್ದುಗಳನ್ನ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಹೃದಯಾಘಾತ ತಡೆಯುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ದುಬಾರಿ ಬೆಲೆಯ ಚುಚ್ಚುಮದ್ದು ಟೆನೆಕ್ಟೆಪ್ಲೇಸ್ ಅನ್ನ ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಮುಂದೆ ಉಚಿತವಾಗಿ ಪಡೆಯಬಹುದಾಗಿದೆ. ನಮ್ಮ ಗ್ರಾಮೀಣ ಪ್ರದೇಶದ ಜನರು ಇದರ ಉಪಯೋಗ ಪಡೆಯವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.

ಏನಿದು ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ

ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, 71 ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನ ಸ್ಪೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರದಂತೆ 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನ ಹಬ್ ಕೇಂದ್ರಗಳನ್ನಾಗಿ ರಚಿಸಲಾಗಿದೆ. ಎದೆನೋವು ಕಾಣಿಸಿಕೊಂಡವರು ಸ್ಪೋಕ್ ಕೇಂದ್ರಗಳಿಗೆ ಭೇಟಿ ನೀಡಿದ ವೇಳೆ 6 ನಿಮಿಷದೊಳಗೆ ಅವರ ಕಂಡಿಷನ್ ಕ್ರಿಟಕಲ್ ಹಂತದಲ್ಲಿದೆಯೋ ಇಲ್ಲವೋ ಎಂಬುದನ್ನ AI ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುವುದು. Tricog ಸಂಸ್ಥೆಯವರ AI ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮೂನ್ಸೂಚನೆಯನ್ನ ನೀಡುತ್ತಾರೆ. ಕ್ರಿಟಿಕಲ್ ಎಂದು ಖಚಿತವಾದ ತಕ್ಷಣವೇ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನ ಸ್ಪೋಕ್ ಕೇಂದ್ರಗಳಾದ ತಾಲೂಕು ಆಸ್ಪತ್ರೆಯಲ್ಲೇ ನೀಡಲಾಗುವುದು. ಇದರಿಂದ ಹಠಾತ್ ಹೃದಯಾಘಾತವನ್ನ ತಡೆಯುವುದರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಅತ್ಯಾದುನಿಕ ಅಂಬುಲೆನ್ಸ್ ನಲ್ಲಿ ಹಬ್ ಕೇಂದ್ರಳಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕಳಿಸಿಕೊಡಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಯೂ ಉಚಿತ ಶಸ್ತ್ರ ಚಿಕಿತ್ಸೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಗೋಲ್ಡನ್ ಅವರ್ ಒಳಗಡೆ ಜೀವ ಉಳಿಸುವ ಚಿಕಿತ್ಸೆ ದೊರೆಯುವಂತೆ ಯೋಜನೆ ರೂಪಿಸಲಾಗಿದೆ.‌

ಮೊದಲ ಹಂತದಲ್ಲಿಯೇ ಗಮನಸೆಳೆದ ಯೋಜನೆ

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಮೊದಲನೇ ಹಂತದಲ್ಲಿ STEMI ಹೆಸರಲ್ಲಿ ಹಬ್ ಸ್ಪೋಕ್ ಮಾದರಿಯನ್ನ ಜಯದೇವಾ ಹೃದ್ರೋಗ ಸಂಸ್ಥೆಯೊಂದಿಗೆ 45 ಆಸ್ಪತ್ರೆಗಳಲ್ಲಿ ಜಾರಿಗೊಳಿಸಲಾಗಿತ್ತು. ಆದರೆ ಮೊದಲ ಹಂತದ ಯೋಜನೆಯಲ್ಲಿ ಜೀವರಕ್ಷಕವಾಗಿರುವ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಲಭ್ಯವಿರಲಿಲ್ಲ. ಇಂದಿನಿಂದ ಈ ಚುಚ್ಚುಮದ್ದು ಲಭ್ಯವಾಗಲಿದ್ದು ಹೆಚ್ಚು ಪರಿಣಾಮಕಾರಿಯಾಗಿ ಜನರಿಗೆ ಸೇವೆ ಒದಗಿಸುವಲ್ಲಿ ಅನುಕೂಲವಾಗಲಿದೆ. ಮೊದಲ ಹಂತದಲ್ಲಿ ಇಲ್ಲಿಯವರೆವಿಗೂ ಸುಮಾರು 1,23,607 ಹೃದಯಸಂಬಂಧಿ ರೋಗಲಕ್ಷಣ ಹೊಂದಿರುವವರನ್ನು ಈ ಕೇಂದ್ರಗಳಲ್ಲಿ ತಪಾಸಣೆ ಮಾಡಲಾಗಿದ್ದು, 1,27,999 ECG ಗಳನ್ನು ತೆಗೆಯಲಾಗಿದೆ, ಮತ್ತು 2,088 ಹೃದಯಾಘಾತ ರೋಗಿಗಳಿಗೆ ಉನ್ನತ ಮಟ್ಟದ ಹಬ್ ಆಸ್ಪತ್ರೆಗಳಲ್ಲಿ 511 ಥಂಬೋಲಿಸಿಸ್, 371 ಆಂಜಿಯೋಪ್ಲಾಸ್ಟಿ, ಮತ್ತು 07 ಬೈಪಾಸ್ ಸರ್ಜರಿಗಳನ್ನ ನಡೆಸಲಾಗಿದೆ. ಇನ್ನು ಉಳಿದವರು ಔಷಧಿ ಚಿಕಿತ್ಸೆಯನ್ನು ಮುಂದುರೆಸಿರುತ್ತಾರೆ.

ಕಾರ್ಯಕ್ರಮದ ಎರಡನೇ ಹಂತದ ಹೈಲೈಟ್ಸ್

15 ಜಿಲ್ಲೆಗಳಲ್ಲಿ – 8 HUBs (ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಮತ್ತು ಬಳ್ಳಾರಿ ಹಬ್)
41 SPOKES (05 ಜಿಲ್ಲಾ ಮತ್ತು 36 ತಾಲ್ಲೂಕು, ಆಸ್ಪತ್ರೆಗಳಲ್ಲಿ)

ಹಠಾತ್ ಹೃದಯಾಘಾತ ರೋಗಿಗಳ ಚಿಕಿತ್ಸೆಗಾಗಿ ಹೆಚ್ಚು ಪರಿಣಾಮಕಾರಿಯಾದ ಔಷಧಿ 25,000/- ರಿಂದ ರೂ.30,000 ಸಾವಿರ ಮೌಲ್ಯದ Injection Tenecteplase (30mg, 40mg) ಎಲ್ಲಾ ತೀವ್ರ ಹೃದಯಾಘಾತ ರೋಗಿಗಳಿಗೆ SPOKES ಆಸ್ಪತ್ರೆಗಳಲ್ಲಿಯೇ ಉಚಿತವಾಗಿ ನೀಡಲಾಗುತ್ತದೆ.

ಹೃದಯಾಘಾತ ರೋಗಿಗಳ ಉತ್ತಮ ಹಾಗೂ ಗುಣ ಮಟ್ಟದ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ 2 ದಿವಸದ CCLS (Coronary Care Life Support) ತರಬೇತಿಯನ್ನು ಮತ್ತು 01 ದಿನದ STLS (Safe Transport Life Support) ತರಬೇತಿಯನ್ನು ಜೀವರಕ್ಷ ಟ್ರಸ್ಟ್ ವತಿಯಿಂದ ನೀಡಲಾಗುವುದು.

41 AED – Automated External Defibrillator ಸಾಧನಗಳನ್ನು ಜನದಟ್ಟನೆಯ ಸಾರ್ವಜನಿಕ ಸ್ಥಳಗಳಲ್ಲಿ (ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು, ವಿಮಾನ ನಿಲ್ದಾಣಗಳು, ನ್ಯಾಯಾಲಯ ಸಂಕೀರ್ಣಗಳು ಆಸ್ಪತ್ರೆಗಳಲ್ಲಿ) ಹಠಾತ್ ಹೃದಯಾಘಾತ ದಿಂದಾಗುವ ಮರಣಗಳನ್ನು ತಪ್ಪಿಸಲು 2ನೇ ಹಂತದ ಪ್ರಮುಖ ಅಂಶವಾಗಿದ್ದು ಅತಿ ಶೀಘ್ರದಲ್ಲಿ ಅಳವಡಿಸಲಾಗುವುದು.

Puneeth Rajkumar's 'Hridaya Jyothi' scheme to be launched across Karnataka ಕರ್ನಾಟಕದಾದ್ಯಂತ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ 'ಹೃದಯ ಜ್ಯೋತಿ' ಯೋಜನೆ ಜಾರಿ: ಇಲ್ಲಿದೆ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM2 Mins Read

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM1 Min Read

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಶ್ವರ್ ಖಂಡ್ರೆ ಸೂಚನೆ

08/07/2025 4:45 PM1 Min Read
Recent News

‘ಡ್ರೀಮ್ ಲೈನರ್ ಅತ್ಯಂತ ಸುರಕ್ಷಿತ ವಿಮಾನ’ : ‘ಸಂಸದೀಯ ಸಮಿತಿ’ಗೆ ‘ಏರ್ ಇಂಡಿಯಾ’ ಉತ್ತರ

08/07/2025 4:56 PM

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

08/07/2025 4:54 PM

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಶ್ವರ್ ಖಂಡ್ರೆ ಸೂಚನೆ

08/07/2025 4:45 PM
State News
KARNATAKA

BREAKING : ರಾಜ್ಯದಲ್ಲಿ ಮುಂದುವರೆದ ‘ಹೃದಯಾಘಾತ’ ಮರಣ ಮೃದಂಗ : ಇಂದು ಒಂದೇ ದಿನ 6 ಜನರ ಸಾವು!

By kannadanewsnow0508/07/2025 4:54 PM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇಂದು ರಾಜ್ಯದಲ್ಲಿ ಒಂದೇ ದಿನ 6 ಜನ ಹೃದಯಘಾತಕ್ಕೆ ಬಲಿಯಾಗಿದ್ದಾರೆ.…

BREAKING : ನಟ ದರ್ಶನ್ ಗೆ ವಿದೇಶಕ್ಕೆ ತೆರಳಲು, ಜುಲೈ 11 ರಿಂದ 30ರವರೆಗೆ ಅನುಮತಿ ನೀಡಿದ ಕೋರ್ಟ್

08/07/2025 4:52 PM

GOOD NEWS : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ : ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಶ್ವರ್ ಖಂಡ್ರೆ ಸೂಚನೆ

08/07/2025 4:45 PM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ನೀರು ಕುಡಿಯುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು!

08/07/2025 4:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.