ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಈ ವರ್ಷದಿಂದ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು.
ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು ಹಬ್ ಮತ್ರು ಸ್ಪೋಕ್ ಮಾದರಿಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ. ಹೃದಯ ಜ್ಯೋತಿ ಯೋಜನೆ ಇಂದು ಸಾವಿರಾರು ಜನರ ಜೀವ ಉಳಿಸುವಲ್ಲಿ ಯಶಸ್ವಿಯಾಗಿದೆ. ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸದನಕ್ಕೆ ತಿಳಿಸಿದರು.
ಈ ವರ್ಷದಿಂದ ಹೃದಯಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
– @dineshgrao, ಆರೋಗ್ಯ ಸಚಿವರು pic.twitter.com/4JJslhjs9i
— DIPR Karnataka (@KarnatakaVarthe) August 18, 2025
BREAKING: ಭಾರೀ ಮಳೆ ಹಿನ್ನಲೆ: ನಾಳೆ ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ: ಈವರೆಗೆ 6.24 ಲಕ್ಷ ಜನರಿಂದ ವೀಕ್ಷಣೆ