ಮಂಗಳೂರು : ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ನೆನ್ನೆ ಗೆಲುವು ಸಾಧಿಸಿದ್ದ ವೇಳೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯದವರು ಬಿಜೆಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿ ದೊಡ್ಡ ಹೈಡ್ರಾಮವೇ ನಡೆಯಿತು.
ಎಂಎಸ್‌ಎಂಇಗಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಆರಂಭಿಸಿದೆ: ಪ್ರಧಾನಿ ಮೋದಿ
ಮಂಗಳೂರಿನ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರುಗಡೆ ಪಾಕ್ ಪರ ಘೋಷಣೆ ಕೂಗಿದನ್ನು ಆರೋಪಿಸಿ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು, ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಸಾಕಷ್ಟು ಹೈಡ್ರಮಾ ನಡೆದಿದೆ.
ವಾಹನದ ನಂಬರ್ ಪ್ಲೇಟಲ್ಲಿ ಸರ್ಕಾರದ ‘ಲಾಂಛನ-ಚಿಹ್ನೆ’ ದುರ್ಬಳಕೆ : ಕೇಂದ್ರ,ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರೀ ಎದುರುಗಡೆ ಈ ಪ್ರತಿಭಟನೇ ನಡೆದಿದೆ. ಮಲ್ಲಿಕಟ್ಟೆ ಬಳಿ ಇರುವ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಕೂಡಲೇ ನಾಸಿರ್ ಹುಸೇನ್ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮೋರ್ಚಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ ಕಾರಿದ್ದಾರೆ ಇದೇ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರ ನಡುವೆ ನೂಕಾಟ ತಲಾಟ ನಡೆದಿದ್ದು ಇದೀಗ ಪೊಲೀಸರು ಅವರನ್ನು ವಶಪಡಿಸಿಕೊಂಡಿದ್ದಾರೆ .
‘ಪಾಕಿಸ್ತಾನ’ ಪರ ಘೋಷಣೆ ಆರೋಪ : ‘FSL’ ವರದಿ ಸಾಬೀತಾದರೆ ಯಾರೇ ಇದ್ದರು ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ