ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಶೀಘ್ರದಲ್ಲೇ 2000 ಸಾರಿಗೆ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂಬುದಾಗಿದೆ. ಹೀಗಾಗಿ ಹೊಸದಾಗಿ 2000 ಸರ್ಕಾರಿ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿದ್ದು, ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಸಂಚಾರಕ್ಕೆ ಅವಕಾಶ ಸಿಗುವಂತೆ ಆಗಲಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು ಎಂದಿದ್ದಾರೆ.
ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ.
ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ… pic.twitter.com/brNwi9hk6t
— Siddaramaiah (@siddaramaiah) March 22, 2025
ಬಿಹಾರದಲ್ಲಿ ಮತ್ತೊಂದು ಕೊಲೆ, ಸರ್ಕಾರಿ ಶಾಲಾ ಶಿಕ್ಷಕನನ್ನು ಗುಂಡಿಕ್ಕಿ ಹತ್ಯೆ
ನಾಗ್ಪುರ ಹಿಂಸಾಚಾರ: ಮತ್ತೆ 14 ಮಂದಿ ಬಂಧನ, ಬಂಧಿತರ ಸಂಖ್ಯೆ 105ಕ್ಕೆ ಏರಿಕೆ, 3 ಹೊಸ FIR ದಾಖಲು | Nagpur violence