ರಾಮನಗರ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಸುದ್ದಿಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾದಂತ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ರಾಮನಗರದಲ್ಲೂ ಅಶ್ಲೀಲ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಹರಿದಾಡುತ್ತಿದೆ.
ಸೋಷಿಯಲ್ ಮೀಡಿಯಾದಲ್ಲಿ ರಾಮನಗರ ಕಾಂಗ್ರೆಸ್ ಶಾಸಕನ ವೀಡಿಯೋ ವೈರಲ್ ಆಗುತ್ತಿದ್ದಂತೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂಧರ್ ಅವರು ರಾಮನಗರ ಸಿಇಎನ್ ಪೊಲೀಸ್ ಠಾಣೆಗೆ ವೀಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಪೊಲೀಸರಿಗೆ ನೀಡಿರುವಂತ ದೂರಿನಲ್ಲಿ, ಕಾಂಗ್ರೆಸ್ ಶಾಸಕರ ತೇಜೋವಧೆ ಮಾಡಲು ಕೆಲ ಮಂದಿ ನಕಲಿ ವೀಡಿಯೋವನ್ನು ಎಡಿಟ್ ಮಾಡಿ ಹೀಗೆ ಹರಿ ಬಿಟ್ಟಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ದೂರಿನ ಹಿನ್ನಲೆಯಲ್ಲಿ ರಾಮನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.
BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ‘ಗೂಗಲ್’ ಡೌನ್: ಬಳಕೆದಾರರು ಪರದಾಟ | Google Down
ಮೇ.7ರಂದು ‘ಲೋಕಸಭಾ ಚುನಾವಣೆ’ಗೆ ಎರಡನೇ ಹಂತದ ಮತದಾನ: ‘ವೇತನ ಸಹಿತ ರಜೆ’ ಘೋಷಣೆ