ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಉನ್ನತ ಅಧಿಕಾರಿಗಳ ತಂಡವು ವಿಜಯ್ ಘಾಟ್, ರಾಷ್ಟ್ರೀಯ ಸ್ಮೃತಿ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಕೆಲವು ಸ್ಥಳಗಳಿಗೆ ಭೇಟಿ ನೀಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ
ಆದಾಗ್ಯೂ, ಸ್ಮಾರಕವು ಯಾವ ಸ್ಥಳದಲ್ಲಿ ಬರಲಿದೆ ಎಂಬುದರ ಬಗ್ಗೆ ಇನ್ನೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.
ಸಿಂಗ್ ಅವರ ಸ್ಮಾರಕಕ್ಕಾಗಿ ಸ್ಥಳವನ್ನು ಅಂತಿಮಗೊಳಿಸಲು ಕೇಂದ್ರ ಗೃಹ ಸಚಿವಾಲಯ ಮತ್ತು ಎಚ್ಯುಎ ಸಚಿವಾಲಯದ ಅಧಿಕಾರಿಗಳ ನಡುವೆ ಸಭೆಗಳು ನಡೆದಿವೆ.
ಮನಮೋಹನ್ ಸಿಂಗ್ ಸ್ಮಾರಕಕ್ಕೆ ಭೂಮಿ ಗುರುತಿಸುವ ಪ್ರಕ್ರಿಯೆ ಆರಂಭ
ಇದಕ್ಕೂ ಮುನ್ನ ಕೇಂದ್ರ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ) ಅಧಿಕಾರಿಗಳು ಸಂಜಯ್ ಗಾಂಧಿ ಸ್ಮಾರಕ, ರಾಷ್ಟ್ರೀಯ ಸ್ಮೃತಿ ಸ್ಥಳದ ಸುತ್ತಮುತ್ತಲಿನ ಸ್ಥಳಗಳಿಗೆ ಭೇಟಿ ನೀಡಿ ಸ್ಮಾರಕಕ್ಕಾಗಿ ಕೆಲವು ಸ್ಥಳಗಳನ್ನು ಗುರುತಿಸಿದ್ದರು.
ಸರ್ಕಾರವು ಮಾಜಿ ಪ್ರಧಾನಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಮತ್ತು ಸ್ಮಾರಕದ ಸ್ಥಳಕ್ಕಾಗಿ ಮೂರು ಅಥವಾ ನಾಲ್ಕು ಆಯ್ಕೆಗಳ ಬಗ್ಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಯಾವುದೇ ಸ್ಥಳವನ್ನು ಅಂತಿಮಗೊಳಿಸಲಾಗಿಲ್ಲ ಮತ್ತು ಸಿಂಗ್ ಅವರ ಕುಟುಂಬದೊಂದಿಗೆ ಸಮಾಲೋಚಿಸಿ ಎಲ್ಲವನ್ನೂ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಸ್ಮಾರಕಕ್ಕಾಗಿ ಆಯ್ದ ಭೂಮಿಯನ್ನು ಮಂಜೂರು ಮಾಡುವ ಮೊದಲು ಕೇಂದ್ರವು ಟ್ರಸ್ಟ್ ಅನ್ನು ಸ್ಥಾಪಿಸುತ್ತದೆ.
ಮಾಜಿ ಪ್ರಧಾನಿಯವರ ಕುಟುಂಬಕ್ಕೆ ಸ್ಮಾರಕವನ್ನು ಸ್ಥಾಪಿಸುವ ಇಚ್ಛೆಯನ್ನು ಸರ್ಕಾರ ಈಗಾಗಲೇ ವ್ಯಕ್ತಪಡಿಸಿದೆ.