ಹುಬ್ಬಳ್ಳಿ : ಇದು ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ಯುವಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಅರೆಸ್ಟ್ ಮಾಡಿವರು ಘಟನೆ ವರದಿಯಾಗಿದೆ.
ಹೌದು ಆರೋಪಿ ಯುವಕನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪಿಎಸ್ಐ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳು ಪೊಲೀಸ್ ಸಿಬ್ಬಂದಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಆರೋಪಿಯು 5 ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕಿಡ್ನಾಪ್ ಮಾಡಿ ಬಳಿಕ ಅತ್ಯಾಚಾರ ಆಗಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನೆ ಖಂಡಿಸಿ ಹುಬ್ಬಳ್ಳಿ ನಗರದಾದ್ಯಂತ ಪ್ರತಿಭಟನೆ ಜೋರಾಗಿದ್ದು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನಾಕಾರರು ಆತನನ್ನು ಎನ್ಕೌಂಟರ್ ಮಾಡುವಂತೆ ಆಕ್ರೋಶ ಹೊರಹಾಕಿದ್ದಾರೆ.