ಹುಬ್ಬಳ್ಳಿ : ಹುಬ್ಬಳ್ಳಿಯ ಅಂಜಲಿ ಅಂಬೀಗೆರ ಹತ್ಯೆ ಪ್ರಕರಣ ಸಂಬಂಧ ಕಾನೂನು ಸುವವ್ಯವಸ್ಥೆ ಡಿಸಿಪಿ ಪಿ. ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಂಜಲಿ ಕೊಲೆ ಹಿನ್ನೆಲೆಯಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಕಾನೂನು ಸುವವ್ಯವಸ್ಥೆ ಡಿಸಿಪಿ ರಾಜೀವ್ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಅಂಜಲಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಇದೀಗ ಡಿಸಿಪಿ ರಾಜೀವ್ ಅವರನ್ನೂ ಅಮಾನತುಗೊಳಿಸಲಾಗಿದೆ.