ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಹಾಗೂ ಲಿಂಗರಾಜು ಬೀರನೂರು(19) ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾದಂತೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಐವರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ದೇಶ ಆರ್ಥಿಕವಾಗಿ ಭೀಕರ ಸ್ಥಿತಿಯಲ್ಲಿದ್ದಾಗ ಸರಿದಾರಿಗೆ ತಂದಿದ್ದು ಮನಮೋಹನ್ ಸಿಂಗ್: HDD ಗುಣಗಾನ
BREAKING:’ಸುಜುಕಿ ಮೋಟಾರ್’ ಕಂಪನಿಯ ಮಾಜಿ ಅಧ್ಯಕ್ಷ ಒಸಾಮು ಸುಜುಕಿ ನಿಧನ