ಹುಬ್ಬಳ್ಳಿ: ಜಿಲ್ಲೆಯಲ್ಲಿ ದೇವಸ್ಥಾನವೊಂದರಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತವೇ ನಡೆದಿತ್ತು. ಈ ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಇವರನ್ನು ಕಿಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾದಂತೆ ಆಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ತೇಜಸ್ ಸುತಾರೆ ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾದಂತೆ ಆಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಇಬ್ಬರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
BREAKING: ರಾಜ್ಯದಲ್ಲಿ ‘ನಕ್ಸಲ್ ಶರಣಾಗತಿ ನೀತಿ’ ಸರಳೀಕರಣ, ಮುಖ್ಯವಾಹಿನಿಗೆ ತರಲು ಬದ್ಧ: ಸಿಎಂ ಸಿದ್ಧರಾಮಯ್ಯ ಘೋಷಣೆ
GOOD NEWS: ಮಾ.15ರೊಳಗೆ ಕುಸುಮ್- ಸಿ ಮೊದಲ ಹಂತದಡಿ 1,300 ಮೆ.ವ್ಯಾ ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್
SHOCKING : ಚಳಿಗೆ ಹೊಗೆ ಹಾಕಿ ಮಲಗಿದಾಗಲೇ ದುರಂತ : ಉಸಿರುಗಟ್ಟಿ ದಂಪತಿ ಸಾವು.!