ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ಸಿಲಿಂಡರ್ ಸ್ಪೋಟ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ 8 ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಸಾವನ್ನಪ್ಪಿದ್ದಂತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿ ಆದೇಶಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಕಾರ್ಮಿಕ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪತ್ರ ಬರೆದಿದ್ದರು. ಚಿಕಿತ್ಸೆ ಫಲಿಸದೇ ಮೃತಪಟ್ಟ 8 ಮಾಲಾಧಾರಿಗಳ ಕುಟುಂಬಕ್ಕೂ ಪರಿಹಾರ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದರು.
ಸಚಿವ ಸಂತೋಷ್ ಲಾಡ್ ಪತ್ರಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸಿರುವಂತ ಸಿಎಂ ಸಿದ್ಧರಾಮಯ್ಯ, ಹುಬ್ಬಳ್ಳಿಯ ಸಿಲಿಂಡರ್ ಸ್ಪೋಟ ದುರಂತದಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದಂತ 8 ಅಯ್ಯಪ್ಪ ಮಾಲಾಧಾರಿ ಕುಟುಂಬಕ್ಕೂ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಅಂದಹಾಗೆ ಡಿಸೆಂಬರ್.22ರಂದು ಹುಬ್ಬಳ್ಳಿಯ ಅಚ್ಚವ್ವ ಕಾಲೋನಿಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಸಿಲಿಂಡರ್ ಸ್ಪೋಟಗೊಂಡಿತ್ತು. ಈ ದುರಂತದಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ 8 ಮಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ: ಜ.5ರವರೆಗೆ ಅಪೂರ್ಣ ಅರ್ಜಿ ಪೂರ್ಣಗೊಳಿಸಲು ಅವಕಾಶ
ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting