ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿತ್ತು. ಈ ಹಿನ್ನಲೆಯಲ್ಲಿ ಈಶ್ವರ ದೇವಾಲಯ ನೆಲಸಮ ಮಾಡಲು ನಿರ್ಧರಿಸಲಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ಶಂಕರ್ ಚೌಹಾಣ್ (29) ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅಲ್ಲದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕೂಡ ಮೃತಪಟ್ಟಿದ್ದರು. ಹೀಗಾಗಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿತ್ತು. ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಮೂವರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ಈ ಘಟನೆಯ ಬೆನ್ನಲ್ಲೇ ಹುಬ್ಬಳ್ಳಿ ಸಾಯಿ ನಗರದ ಈಶ್ವರದೇವಸ್ಥಾನವನ್ನು ನೆಲಸಮಗೊಳಿಸುಲ ಗಜಾನನ ಜಿತೂರಿ ಸ್ವಾಮೀಜಿ ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
BREAKING: ಅಪಘಾತಕ್ಕೀಡಾದ ವಿಮಾನವನ್ನು ರಷ್ಯಾ ಹೊಡೆದುರುಳಿಸಲಾಗಿದೆ: ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್
ಡಿ.31ರಂದು ಅಲ್ಲಿ ಇಲ್ಲಿ ಯಾಕೆ? ‘ಫ್ಯಾಮಿಲಿ ಸಹಿತ’ ಇಲ್ಲಿಗೆ ಹೋಗಿ, ಹೊಸ ವರ್ಷಾಚರಣೆ ಮಾಡಿ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ