ಹುಬ್ಬಳ್ಳಿ: ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿಯರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ , ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಶಂಕರ ಚವ್ಹಾಣ್ (29) ಮೃತ ಮಾಲಾಧಾರಿ ಅಯ್ಯಪ್ಪ ಭಕ್ತರಾಗಿದ್ದಾರೆ.
ಡಿಸೆಂಬರ್ 23ರಂದು ಬೆಳಗ್ಗಿನ ಜಾವ ಹುಬ್ಬಳ್ಳಿಯ ಉಣಕಲ್ ಅಚ್ಚವ್ವ ಕಾಲೊನಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ತಕ್ಷಣವೇ ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ನಡುವೆ : ಗುರುವಾರ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರವು ಈಗಾಗಲೇ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.