ಧಾರವಾಡ: ಜಿಲ್ಲೆಯಲ್ಲಿ ಜನರಿಗೆ ಭಯ ಹುಟ್ಟಿಸಿದ್ದಂತ ಚಡ್ಡಿ ಗ್ಯಾಂಗ್ ಅನ್ನು ಹೆಡೆಮುರಿ ಕಟ್ಟಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸರು ಚಡ್ಡಿ ಗ್ಯಾಂಗ್ ಸದಸ್ಯನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರು, ಇಂದು ಬೆಳಿಗ್ಗೆ 3 ರಿಂದ 3.30 ಸಮಯದಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ನವಲೂರಿನಲ್ಲಿ ವ್ಯಕ್ತಿಯೊಬ್ಬರ ಮನೆಯ ಮೇಲೆ ಕಲ್ಲು ಬೀಸಿ, ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ದರೋಡೆಕೋರರ ಪತ್ತೆ ಕಾರ್ಯ ನಡೆಸಿದ್ದಾರೆ ಎಂದರು.
ಈ ವೇಳೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಹಲವರ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂಡಸ್ಟ್ರೀಯಲ್ ಏರಿಯಾದ ಪಾರ್ಕ್ ಸುತ್ತಾಮುತ್ತಾ ಮಾಹಿತಿ ಸಿಕ್ಕ ಕಾರಣ, ಪೊಲೀಸರು ಅಲ್ಲಿಗೆ ತೆರಳುತ್ತಾರೆ. ಪೊಲೀಸರನ್ನು ಕಂಡ ಮತ್ತೊಬ್ಬ ಆರೋಪಿ ಅವರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳೋದಕ್ಕೆ ಪ್ರಯತ್ನಿಸಿದ್ದಾನೆ. ಆಗ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಎಂಬುವರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ. ಆದರೇ ಇದಕ್ಕೆ ಜಗ್ಗದೆ ಪರಾರಿಯಾಗಲು ಯತ್ನಿಸಿದಾಗ ಆತನ ಎರಡು ಕಾಲಿಗೆ ಗುಂಡೇಟು ನೀಡಿ ಬಂಧಿಸಲಾಗಿದೆ ಎಂದು ತಿಳಿಸಿದರು.
ಜೂನ್.6ನೇ ತಾರೀಕು ಹಿರಿಯ ನಾಗರೀಕರೊಬ್ಬರ ಮನೆಯ ಮೇಲೆ ದಾಳಿ ನಡೆಸಿ, ಮನೆಯಲ್ಲಿದ್ದಂತ ದಂಪತಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ದರೋಡೆ ಮಾಡಿ ತೆರಳಿದ್ದರು. ರಾಯಚೂರು, ಚಿಕ್ಕಬಳ್ಳಾಪುರ, ಮಂಡ್ಯ ಸೇರಿದಂತೆ ನೆರೆಯ ತಮಿಳುನಾಡು ಇತರೆ ರಾಜ್ಯಗಳಲ್ಲೂ ಡಕಾಯತಿ ಕೇಸ್ ದಾಖಲಾಗಿದ್ದಾವೆ ಎಂದರು.
BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ