ಬೆಂಗಳೂರು: ಮಾಜಿ ಸಂಸದ ಡಿ.ಕೆ ಸುರೇಶ್ ಅವರ ಸಹೋದರಿ ಅಂತ ಹೇಳಿಕೊಂಡು ಜ್ಯೂವೆಲ್ಲರಿ ಅಂಗಡಿಗೆ ಶ್ವೇತಾಗೌಡ ಎಂಬುವರು ಮೋಸ ಮಾಡಿದ್ದಾರೆ ಎಂಬುದಾಗಿ ಆರೋಪಿಸಲಾಗಿತ್ತು. ಈ ಬಗ್ಗೆ ಡಿಕೆ ಸುರೇಶ್ ಏನು ಹೇಳಿದ್ರು ಅಂತ ಮುಂದೆ ಓದಿ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ನನ್ನ ಹೆಸರನ್ನು ಬಳಸಿಕೊಂಡು ಶ್ವೇತಗೌಡ ಎಂಬಾಕೆ ಚಿನ್ನದ ಅಂಗಡಿ ಮಾಲೀಕರಿಗೆ ವಂಚಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನ್ನ ಹೆಸರು ದುರುಪಯೋಗ ಮಾಡಿಕೊಂಡು ಹೀಗೆ ಮಾಡಲಾಗಿದೆ. ಪೊಲೀಸರಿಂದ ಮಾಹಿತಿ ಪಡೆದು, ಇನ್ನೊಂದು ಎರಡು ಮೂರು ದಿನಗಳಲ್ಲೇ ಪೊಲೀಸ್ ಕಮೀಷನರಿಗೆ ದೂರು ನೀಡುತ್ತೇನೆ ಎಂದರು.
ಈ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ ಕೈಗೊಳ್ಳಲಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಯಲಿ ಅಂತ ತಾನು ಗೃಹ ಸಚಿವರಿಗೆ ಪತ್ರ ಬರೆಯುವುದಾಗಿಯೂ ತಿಳಿಸಿದರು.
ನನಗೂ ಶ್ವೇತಾಗೌಡಗೂ ಯಾವುದೇ ಸಂಬಂಧವಿಲ್ಲ. ಒಂದೆರಡು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ಆಗ ನಾನು ಹೋಗಿದ್ದೆ. ಅದು ಬಿಟ್ಟರೆ ಆಕೆ ನನಗೆ ಪರಿಚಯವಿಲ್ಲ. ನನಗೆ ಇರೋದು ಒಬ್ಬಳೇ ತಂಗಿ ಎಂಬುದಾಗಿ ಸ್ಪಷ್ಟ ಪಡಿಸಿದರು.
BIG NEWS: ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ: ಈ ನಿಯಮಗಳ ಪಾಲನೆ ಕಡ್ಡಾಯ
ಚಡ್ಡಿ ಗ್ಯಾಂಗ್ ಹೆಡಮುರಿ ಕಟ್ಟಿದ ಹುಬ್ಬಳ್ಳಿ-ಧಾರವಾಡ ಪೋಲೀಸರು: ಸದಸ್ಯನ ಕಾಲಿಗೆ ಗುಂಡೇಟು, ಅರೆಸ್ಟ್