ಬೆಂಗಳೂರು: ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಹಾಗೂ ಅಕ್ರಮಗಳ ಕುರಿತು ಶಿಸ್ತು ಪ್ರಕರಣದ ತನಿಖೆಗೆ ಸಮಿತಿಯನ್ನು ರಚಿಸಿತ್ತು. ಈ ಸಮಿತಿ ನೀಡಿದಂತ ವರದಿಯ ಆಧಾರದ ಮೇಲೆ ಶಿಸ್ತು ಕ್ರಮಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಹಲವಾರು ಅಕ್ರಮಗಳು ಜರುಗಿದೆ ಎಂದು ತಿಳಿದು ಬಂದಿದೆ. ನಿವೇಶನಗಳ ಹಂಚಿಕೆಯಲ್ಲಿ ಆಗಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಜಂಟಿ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಈಗಾಗಲೇ ಆದೇಶಿಸಲಾಗಿದೆ.

ಅದರಂತೆ ತನಿಖಾ ವರದಿ ಸಲ್ಲಿಸಿದ್ದು, ಸದರಿ ತನಿಖಾ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ದೋಷಾರೋಪಣಾ ಪಟ್ಟಿಯನ್ನು ತಯಾರಿಸಿ, ಶಿಸ್ತು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಆಯುಕ್ತರಿಗೆ ಕೋರಲಾಗಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಎಂ ತಿಪ್ಪೇಶ, ಹಿಂದಿನ ಆಯುಕ್ತರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ, ಹೆಚ್.ಪರಮೇಶ್ವರಪ್ಪ, ನಿರ್ಮಲಾ ರಾಠೋಡ್ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವ : ಸ್ನಾತಕ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

Share.
Exit mobile version