Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಯಾಬಿಟಿಸ್ ರೋಗಿಗಳಿಗೆ ಗುಡ್ ನ್ಯೂಸ್ : ಇನ್ನು ಇನ್ಸುಲಿನ್ ಇಂಜೆಕ್ಷನ್ ಇಲ್ಲದೆಯೇ `ಶುಗರ್ ಕಂಟ್ರೋಲ್’ ಮಾಡಬಹುದು.!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

BIG NEWS: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ಮುಂದುವರಿಕೆ! ಜೂನ್ 23ರವರೆಗೆ ನಿಷೇಧ ಆದೇಶ ವಿಸ್ತರಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

BIG NEWS: ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ: ಗೃಹ ಸಚಿವ ಡಾ.ಜಿ ಪರಮೇಶ್ವರ್

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಹುಬ್ಬಳ್ಳಿ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ‌. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು.

ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ.‌ ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ ಪ್ರಕರಣಗಳಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕೆಲವು ವಿಶೇಷ ಸೂಚನೆಗಳನ್ನು ನೀಡಿದ್ದೇನೆ. ಅದರ ಪ್ರಕಾರ ಮಾಡಿಕೊಂಡು ಬರುತ್ತಿದ್ದಾರೆ. ಯಾವುದೇ ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಎಲ್ಲ ಕೇಸ್‌ಗಳಲ್ಲಿಯೂ ಆರೋಪಿಗಳನ್ನು ಬಂಧಿಸಿ, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ. ಒಬ್ಬೊಬ್ಬರ ಟೀಕೆಗೆ ಉತ್ತರಿಸಲು ಆಗುವುದಿಲ್ಲ. ಕೋಪ ಬಂದಾಗ, ನೋವಾದಾಗ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಾರೆ. ಅದಕ್ಕೆಲ್ಲ ಉತ್ತರಿಸಲು ಆಗುತ್ತದೆಯೇ? ದೇಶದಲ್ಲಿ ಕಾನೂನು ಇದೆ.‌ ಅದರ‌ ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಟಾಟಾ ಟ್ರಸ್ಟ್‌ನವರು ಕೆಲವು ಮಾನದಂಡಗಳನ್ನು ಇಟ್ಟುಕೊಂಡು ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ ವ್ಯವಸ್ಥೆ ಮೊದಲ ಸ್ಥಾನದಲ್ಲಿದೆ. ಕರ್ನಾಟಕ ಪೊಲೀಸ್ ಬಹಳ ಶ್ರಮ ವಹಿಸಿ ಕೆಲಸ ಮಾಡುತ್ತಿದೆ ಎಂಬುದನ್ನು ಮೊದಲಿನಿಂದಲೂ ಅನೇಕ ಸಂದರ್ಭಗಳಲ್ಲಿ ಹೇಳಿದ್ದೇನೆ. ಇಂದು ಸತ್ಯವಾಗಿದೆ. ಈ ವರದಿಯಿಂದ ರಾಜ್ಯ ಪೊಲೀಸ್ ಇಲಾಖೆಗೆ ಉತ್ತೇಜನ ನೀಡಿದಂತಾಗಿದೆ ಎಂದರು.

ಜಾತಿಗಣತಿ ವರದಿ ಸಚಿವ ಸಂಪುಟದ ಕೈಸೇರಿದ ಬಳಿಕ ಒಂದೇ ದಿನದಲ್ಲಿ ಚರ್ಚಿಸಲು ಆಗುವುದಿಲ್ಲ. ವರದಿಯನ್ನು ಓದಲು ಸಮಯ ಬೇಕು ಎಂದು ಮುಖ್ಯಮಂತ್ರಿಯವರಿಗೆ ತಿಳಿಸಿದಾಗ, ವರದಿಯ ಪ್ರತಿ ನೀಡಿ, ಒಂದು ವಾರ ಕಾಲಾವಕಾಶ ನೀಡಿದ್ದಾರೆ. ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸುತ್ತೇವೆ. ಯಾರಿಗೆ ಏನೇನು ಅಭಿಪ್ರಾಯಗಳಿದೆ, ಅದನ್ನು ಕ್ಯಾಬಿನೆಟ್‌ನಲ್ಲಿ ಹೇಳುತ್ತಾರೆ. ಅಂತಿಮವಾಗಿ ಸರ್ಕಾರ ಏನು ತೀರ್ಮಾನ ಮಾಡುತ್ತದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BIG NEWS: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ಮುಂದುವರಿಕೆ! ಜೂನ್ 23ರವರೆಗೆ ನಿಷೇಧ ಆದೇಶ ವಿಸ್ತರಣೆ

1 Min Read

BIG NEWS : ದೊಡ್ಡಆಲಹಳ್ಳಿಯ ಸಾಮಾನ್ಯ ಹುಡುಗ ಇಂದು ಕರ್ನಾಟಕದ ಮುಖ್ಯಮಂತ್ರಿ : ಡಿ.ಕೆ. ಶಿವಕುಮಾರ್ ರಾಜಕೀಯ ಪಯಣದ ಬಗ್ಗೆ ಇಲ್ಲಿದೆ ಮಾಹಿತಿ

8 Mins Read

BIG NEWS: ಕರ್ನಾಟಕದಲ್ಲಿ ಮದ್ಯ ಮಾರಾಟದಲ್ಲಿ ದಿಢೀರ್ ಕುಸಿತ : ಮೇ ತಿಂಗಳಲ್ಲಿ ಸರ್ಕಾರದ ಆದಾಯಕ್ಕೆ ₹455 ಕೋಟಿ ಹೊಡೆತ

1 Min Read
Recent News

ಡಯಾಬಿಟಿಸ್ ರೋಗಿಗಳಿಗೆ ಗುಡ್ ನ್ಯೂಸ್ : ಇನ್ನು ಇನ್ಸುಲಿನ್ ಇಂಜೆಕ್ಷನ್ ಇಲ್ಲದೆಯೇ `ಶುಗರ್ ಕಂಟ್ರೋಲ್’ ಮಾಡಬಹುದು.!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

BIG NEWS: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ಮುಂದುವರಿಕೆ! ಜೂನ್ 23ರವರೆಗೆ ನಿಷೇಧ ಆದೇಶ ವಿಸ್ತರಣೆ

BIG NEWS : ದೊಡ್ಡಆಲಹಳ್ಳಿಯ ಸಾಮಾನ್ಯ ಹುಡುಗ ಇಂದು ಕರ್ನಾಟಕದ ಮುಖ್ಯಮಂತ್ರಿ : ಡಿ.ಕೆ. ಶಿವಕುಮಾರ್ ರಾಜಕೀಯ ಪಯಣದ ಬಗ್ಗೆ ಇಲ್ಲಿದೆ ಮಾಹಿತಿ

State News
KARNATAKA

BIG NEWS: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ಮುಂದುವರಿಕೆ! ಜೂನ್ 23ರವರೆಗೆ ನಿಷೇಧ ಆದೇಶ ವಿಸ್ತರಣೆ

By kannadanewsnow57 KARNATAKA 1 Min Read

ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಸಂಬಳ ಹೆಚ್ಚಳದ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ನೌಕರರ…

BIG NEWS : ದೊಡ್ಡಆಲಹಳ್ಳಿಯ ಸಾಮಾನ್ಯ ಹುಡುಗ ಇಂದು ಕರ್ನಾಟಕದ ಮುಖ್ಯಮಂತ್ರಿ : ಡಿ.ಕೆ. ಶಿವಕುಮಾರ್ ರಾಜಕೀಯ ಪಯಣದ ಬಗ್ಗೆ ಇಲ್ಲಿದೆ ಮಾಹಿತಿ

BIG NEWS: ಕರ್ನಾಟಕದಲ್ಲಿ ಮದ್ಯ ಮಾರಾಟದಲ್ಲಿ ದಿಢೀರ್ ಕುಸಿತ : ಮೇ ತಿಂಗಳಲ್ಲಿ ಸರ್ಕಾರದ ಆದಾಯಕ್ಕೆ ₹455 ಕೋಟಿ ಹೊಡೆತ

GOOD NEWS : ನಿವೇಶನ ರಹಿತರಿಗೆ ಭರ್ಜರಿ ಗುಡ್ ನ್ಯೂಸ್ : ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜೂ.30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.