ಹುಬ್ಬಳ್ಳಿ : ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಒಬ್ಬನ ಶವ ಅತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರ ನಗರದ ಸಮೀಪದಲ್ಲಿರುವ ಬಿಡಿಸಿ ಬಳಿ ಈ ಒಂದು ಅರೇಬೆಂದ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಹುಬ್ಬಳ್ಳಿ ನಗರದ ಹೊರವಲಯದಲ್ಲಿರುವ ನೇಕಾರ ನಗರದ ಚೆಕ್ ಪೋಸ್ಟ್ ಸಮೀಪದ ಬ್ರಿಡ್ಜ್ ಹತ್ತಿರ ಅರ್ಧ ಸುಟ್ಟ ಸ್ಥಿತಿಯಲ್ಲಿ ಅಂದಾಜು 35- 40 ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾನೆ. ಇಂದು ಬೆಳಿಗ್ಗೆ ದಾರಿಯಲ್ಲಿ ಸಂಚರಿಸುವ ಜನರು ಮೃತದೇಹವನ್ನು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಶವದ ಕುರಿತು ಹಾಗೂ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಆದರೆ ಮೃತ ವ್ಯಕ್ತಿಯ ಗುರುತು ಇದುವರೆಗೂ ಪತ್ತೆ ಆಗಿಲ್ಲ. ಈ ಕುರಿತಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.