ಹಾವೇರಿ: ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸೋ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಹತ್ಯೆ ಘಟನೆ ನಡೆದಿದೆ. ಈ ಘಟನೆಗೆ ಕಾರಣವಾದಂತ ಕೊಲೆಗಡುಕನನ್ನು ಗಲ್ಲಿಗೇರಿಸಬೇಕು ಎಂಬುದಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆಯಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿರುವುದ್ದಕ್ಕೆ ಸಾಕ್ಷಿ. ಇಂತಹ ಹೇಯ ಕೃತ್ಯ ಯಾರೇ ಮಾಡಿರಲಿ ಅವರನ್ನು ತಂದು ಗಲ್ಲಿಗೇರಿಸಿ, ಶಿಕ್ಷೆ ಕೊಡಿಸಿ ಎಂದು ಒತ್ತಾಯಿಸಿದರು.
ಹಾಡಹಗಲೇ ಇಂತಹ ಘೋರ ಕೃತ್ಯ ನಡೆದರೂ ಪೊಲಿಸರು ರಾಜಕಾರಣದ ಪ್ರಕರಣಗಳು ಜಾತಿನಿಂದನೆ ಪ್ರಕರಣ ದಾಖಲಿಸುವುದು ಕ್ಲಬ್ ನಡೆಸುವುದರಲ್ಲಿ ಮಗ್ನರಾಗಿದ್ದಾರೆ. ಈ ರೀತಿಯಲ್ಲಿ ಕೊಲೆ, ಅತ್ಯಾಚಾರಗಳು ನಡೆಯುತ್ತಿದ್ದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ರಾಜ್ಯ ಸರಕಾರವೇ ಮುಂದೆ ನಿಂತು ಕುಮ್ಮಕ್ಕು ನೀಡುವುದನ್ನು ನಾನು ನೋಡಿರಲಿಲ್ಲ. ಇದೊಂದು ಜನವಿರೋಧಿ ಸರಕಾರ ಎಂದು ವಾಗ್ದಾಳಿ ನಡೆಸಿದರು.
BREAKING : ಅತ್ಯಾಚಾರ ಆರೋಪಿ ‘ಸಂದೀಪ್ ಲಾಮಿಚಾನೆ’ಗೆ ಕ್ಲೀನ್ ಚಿಟ್, ಟಿ20 ವಿಶ್ವಕಪ್’ನಲ್ಲಿ ನೇಪಾಳ ಪರ ಆಡುವ ಸಾಧ್ಯತೆ