ಹುಬ್ಬಳ್ಳಿ : ಇಂದು ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಹಾರ ಮೂಲದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ.
ಸರ್ಕಾರದ ಪರಿಹಾರದ ಬಗ್ಗೆ ಸಲೀಂ ಅಹಮದ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ.
ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸಿದೆ ಆರೋಪಿ ಇದೀಗ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.