ಹುಬ್ಬಳ್ಳಿ : ಹುಬ್ಬಳ್ಳಿ ಮತ್ತು ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಸುಮಾರು 17 ಕಳ್ಳತನ ಕೇಸ್ ನಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಹುಬ್ಬಳ್ಳಿ ತಾಲೂಕಿನ ಬೆಂಡಿಗೇರಿ ಠಾಣೆಯ ಎಸ್ಐ ಆರೋಪಿ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ.
ಹೌದು ಆರೋಪಿ ವಿನೋದ್ ಕಾಲಿಗೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಇದೀಗ ಗುಂಡಿನ ದಾಳಿ ನಡೆದಿದೆ. ತಾರಿಹಾಳ ಬಳಿ ಆರೋಪಿ ವಿನೋದ್ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ತಾರಿಹಾಳ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಕಳ್ಳತನ ಪ್ರಕರಣದಲ್ಲಿ ಪೊಲೀಸರು ನಿನ್ನೆ ವಿನೋದನನ್ನು ಬಂಧಿಸಿದ್ದರು. ತನ್ನ ಸಹಚರನ್ನು ತೋರಿಸುತ್ತೇನೆ ಎಂದು ವಿನೋದ್ ಪೊಲೀಸರನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಪೊಲೀಸರ ಮೇಲೆ ವಿನೋದ್ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ.ಬೆಂಡಿಗೇರಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮ ರಕ್ಷಣೆಗಾಗಿ ಪಿಐ ಜಯಶ್ರೀ ವಿನೋದ ಕಾಲಿಗೆ ಗುಂಡು ಹಾರಿಸಿದ್ದಾರೆ.