ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು ಸೇವೆ ಪುನರಾರಂಭಗೊಳುತ್ತಿದೆ. ಏಪ್ರಿಲ್.12ರಿಂದ ಆರಂಭಗೊಳ್ಳಲಿದೆ.
ಈ ಮೊದಲು ಕಾರ್ಯಾಚರಣೆಯ ಕಾರಣಾಂತರಗಳಿಂದ ರದ್ದುಗೊಳಿಸಲಾಗಿದ್ದ ಹುಬ್ಬಳ್ಳಿ-ರಾಮೇಶ್ವರಂ ನಡುವಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸೇವೆಯನ್ನು ಪುನರಾರಂಭಿಸಲಾಗಿದೆ.
ರೈಲು ಸಂಖ್ಯೆ 07355 ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 26, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 12, 2025 ರಿಂದ ಜೂನ್ 28, 2025 ರವರೆಗೆ ಪುನರಾರಂಭಿಸಲಾಗುತ್ತದೆ.
ರೈಲು ಸಂಖ್ಯೆ 07356 ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲನ್ನು ಮೊದಲು ಏಪ್ರಿಲ್ 27, 2025 ರವರೆಗೆ ರದ್ದುಗೊಳಿಸಲಾಗಿತ್ತು. ಈಗ ಏಪ್ರಿಲ್ 13, 2025 ರಿಂದ ಜೂನ್ 29, 2025 ರವರೆಗೆ ಪುನರಾರಂಭಿಸಲಾಗುತ್ತದೆ.
SC ಸಮುದಾಯದವರ ಗಮನಕ್ಕೆ: ವೃತ್ತಿಪರ ತರಬೇತಿ ಕೋರ್ಸ್ ಜೊತೆಗೆ 15,000 ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ