ಹುಬ್ಬಳ್ಳಿ: ರಾಜ್ಯವನ್ನೇ ತಲ್ಲಣಗೊಳಿಸಿದ್ದ ಸರಳ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮುಂದಿನ ಆ.15 ರೊಳಗೆ ಎಲ್ಲಾ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ಪೊಲೀಸರು ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
ಜು.ಜು.5ರಂದು ಹುಬ್ಬಳ್ಳಿಯ ಹೋಟೆಲ್ ವೊಂದರಲ್ಲಿ ಗುರೂಜಿ ಅವರನ್ನು ಹಂತಕರಿಬ್ಬರು ಕೊಲೆಗೈದಿದ್ದರು. ಘಟನೆ ನಡೆದ 4 ಗಂಟೆಯೊಳಗೆ ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ಪೊಲೀಸರು ವಶಕ್ಕೆ ಪಡೆದಿದ್ದರು.ಇದೀಗ ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.