ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ಸಂಬಂಧ ಆರೋಪಿ ಗಿರೀಶ್ ನ್ನು ನಿನ್ನೆ ರಾತ್ರಿ ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಕಮಿಷನರ್ ರೇಣುಕಾ ಅವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡ ಅವರು, ನಿನ್ನೆ ರಾತ್ರಿ ಆರೋಪಿ ಗಿರೀಶ್ ನನ್ನು ವಶಕ್ಕೆ ಪಡೆಯಲಾಗಿದೆ. ಗಿರೀಶ್ ತಲೆ, ಮುಖಕ್ಕೆ ಗಂಭೀರವಾದ ಗಾಯವಾಗಿದೆ. ಚೇತರಿಕೆ ಬಳಿಕ ಗಿರೀಶ್ ನ್ನನು ವಶಕ್ಕೆ ಪಡೆದು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಗಂಭೀರವಾಗಿ ಗಾಯಗೊಂಡ ಗಿರೀಶ್ ನನ್ನು ಇಂದು ಮುಂಜಾನೆ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ. ತನಿಖೆ ಮಾಡದೇ ಪುರಾವೆ ಇಲ್ಲದೇ ಏನೂ ಮಾತನಾಡಲ್ಲ ಎಂದು ತಿಳಿಸಿದ್ದಾರೆ.

Share.
Exit mobile version