ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಿಲಿಂಡರ್ ದುರಂತ ಪ್ರಕರಣದಲ್ಲಿ ಸುಟ್ಟ ಗಾಯದಿಂದ ಗಾಯಗೊಂಡಿದ್ದಂತ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಜುಲೈ.24ರಂದು ಹುಬ್ಬಳ್ಳಿಯ ಶಕ್ತಿ ನಗರದಲ್ಲಿ ಗ್ಯಾಸ್ ಸೋರಿಕೆಯಾಗಿದ್ದರಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ಈ ದುರಂತದಲ್ಲಿ ಸರ್ಕಾರಿ ಶಾಲೆ ದೈಹಿಕ ಶಿಕ್ಷಕಿ ಗಂಗಮ್ಮ, ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು.
ಶೇ.65ರಷ್ಟು ಸುಟ್ಟ ಗಾಯವಾಗಿದ್ದಂತ ಶಿಕ್ಷಕಿ ಗಂಗಮ್ಮ ಅವರನ್ನು ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೇ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇವರ ಪತಿ, ಇಬ್ಬರು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ.
TCS ಉದ್ಯೋಗಿಗಳಿಗೆ ಬಿಗ್ ಶಾಕ್: 12,000 ಉದ್ಯೋಗ ಕಡಿತ- ವರದಿ | TCS to lay off