ಬೆಂಗಳೂರು: ತೆರಿಗೆ ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ಸ್ಥಾನದಲ್ಲಿರುವ ಕರ್ನಾಟಕ 2024- 25 ನೇ ಸಾಲಿನಲ್ಲಿ ತಲಾದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದುಕೊಂಡಿದೆ.
ಲೋಕಸಭೆಗೆ ಕೇಂದ್ರ ಹಣಕಾಸು ಸಚಿವರು ಲಿಖಿತ ಉತ್ತರ ನೀಡಿದ್ದು, ಕಳೆದ ಒಂದು ದಶಕದಲ್ಲಿ ತಲಾದಾಯ ಹೆಚ್ಚಳ ಪ್ರಮಾಣದಲ್ಲಿಯೂ ಕರ್ನಾಟಕ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. 2014-15ರಲ್ಲಿ ಕರ್ನಾಟಕ ಜನರ ತಲಾದಾಯ 1,05,697 ರೂ. ಇತ್ತು. 2024- 25ರಲ್ಲಿ ಶೇಕಡ 93.6 ರಷ್ಟು ಏರಿಕೆಯಾಗಿದ್ದು, 2,04,605ರೂಪಾಯಿಗೆ ತಲುಪಿದೆ.
ರಾಷ್ಟ್ರೀಯ ಸರಾಸರಿಗಿಂತ ದುಪ್ಪಟ್ಟು ಪ್ರಮಾಣದಲ್ಲಿ ತಲಾದಾಯ ಹೆಚ್ಚಳವಾಗಿದೆ. 1.96.309 ರೂ. ತಲಾದಾಯ ಹೊಂದಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.