ರಾಯಚೂರು ಇಲ್ಲಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸಂಜೀವಿನಿ-ಕೆಎಸ್‌ಆರ್‌ಎಲ್‌ಎಸ್ ಬೆಂಗಳೂರು, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಡಿಡಿಯು-ಜಿ.ಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಫೆಬ್ರವರಿ 06ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ವಿದ್ಯಾವಂತ ಯುವಕ-ಯುವತಿಯರು ಈ ಸದಾವಕಾಶವನ್ನು ಪಡೆಯುವಂತೆ ಕೋರಲಾಗಿದೆ.
ಈ ಉದ್ಯೋಗ ಮೇಳದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮತ್ತು ಸ್ಥಳೀಯವಾಗಿ ಅಂದಾಜು 75ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್, ಮಧ್ಯಮ, ಸಣ್ಣ ಉದ್ಯೋಗದಾತ ಕಂಪನಿಗಳು ಭಾಗವಹಿಸುತ್ತಿದ್ದು, ಜಿಲ್ಲೆಯ ವಿದ್ಯಾವಂತ ಯುವಕ/ ಯುವತಿಯರಿಗೆ ಪ್ರತಿಷ್ಠಿತ ಖಾಸಗಿ ವಲಯದಲ್ಲಿ ಉದ್ಯೋಗವನ್ನು ಕಲ್ಪಿಸುವುದು ಉದ್ಯೋಗ ಮೇಳದ ಮುಖ್ಯ ಉದ್ದೇಶವಾಗಿದೆ.
ಈ ಉದ್ಯೋಗ ಮೇಳವು ಉದ್ಯೋಗದಾತರ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳಿಗೆ ಅರ್ಹ ಉದ್ಯೋಗಾಕಾಂಕ್ಷಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಮತ್ತು ಉದ್ಯೋಗಾಕಾಂಕ್ಷಿ ಯುವಕ/ ಯುವತಿಯರು ತಮ್ಮ ಕೌಶಲ್ಯಕ್ಕೆ ಅನುಗುಣವಾಗಿ ಉದ್ಯೋಗವನ್ನು ಆಯ್ಕೆಮಾಡಿಕೊಳ್ಳಲು ಅವಕಾಶವಿರುತ್ತದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು (Job Seekers) ಜಾಲತಾಣ: www.raichurudyogmela.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಅಥವಾ ಕ್ಯೂ ಆರ್ ಕೋಡ್ ಸ್ಕಾö್ಯನ್ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಧನಂಜಯ ಮೂರ್ತಿ ಮೊಬೈಲ್ ಸಂಖ್ಯೆ: 9538753304, ಮಂಜುನಾಥ ಮೊಬೈಲ್ ಸಂಖ್ಯೆ: 7975618955, ಮಹಾದೇವ ಮೊಬೈಲ್ ಸಂಖ್ಯೆ: 7676999304 ಹಾಗೂ ಪ್ರಕಾಶ ಮೊಬೈಲ್ ಸಂಖ್ಯೆ: 9845339241ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








