ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಹೈಕೋರ್ಟ್ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದಂತ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ೨ ದಿನಗಳ ಕಾಲ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಿದ್ದು, ಬೇರೆಡೆಗೆ ಗಣೇಶೋತ್ಸವ ಆಚರಣೆ ಅವಕಾಶ ನೀಡಲಾಗಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಂಡಿತ್ತು.
ಹೈಕೋರ್ಟ್ ನೀಡಿದಂತ ಆದೇಶವನ್ನು ಪ್ರಶ್ನಿಸಿ, ವಕ್ಫೋ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆಯನ್ನು ತ್ರಿಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಸಿತು. ವಾದ-ಪ್ರತಿವಾದ ಆಲಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.
ಇಂದು ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ನ್ಯಾಯಪೀಠದಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ನೀಡಿದಂತ ಹೈಕೋರ್ಟ್ ಅನುಮತಿಯನ್ನು ಪ್ರಶ್ನಿಸಿದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಈ ಬಳಿಕ ಮಧ್ಯಂತರ ಆದೇಶ ನೀಡೋದಕ್ಕೆ ನಿರಾಕರಿಸಿದಂತ ನ್ಯಾಯಪೀಠವು, ಸಿಐಜೆ ನೇತೃತ್ವದ ಪೀಠಕ್ಕೆ ವರ್ಗಾವಣೆ ಮಾಡಿತ್ತು.
ಸುಪ್ರೀಂ ಕೋರ್ಟ್ ನ ಸಿಐಜೆ ನೇತೃತ್ವದ ನ್ಯಾಯಪೀಠಕ್ಕೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಅರ್ಜಿ ವರ್ಗಾವಣೆಗೊಂಡ ನಂತ್ರ, ಒಂದೇ ಗಂಟೆಯಲ್ಲಿ ಮುಖ್ಯ ನ್ಯಾಯಮೂರ್ತಿಗಳು ತ್ರಿಸದಸ್ಯ ಪೀಠವನ್ನುರಚನೆ ಮಾಡಿದರು.
ನ್ಯಾಯಮೂರ್ತಿಗಳಾದಂತ ಇಂದಿರಾ ಬ್ಯಾನರ್ಜಿ, ಎಎಸ್ ಓಕಾ ಹಾಗೂ ಎಂ.ಎಂ ಸುಂದರೇಶ್ ಅವರ ತ್ರಿಸದಸ್ಯ ಪೀಠದ ಮುಂದೆ ಅರ್ಜಿಯ ವಿಚಾರಣೆ ಆರಂಭಗೊಂಡಿತು. ಸುಪ್ರೀಂ ಕೋರ್ಟ್ ನಂ.5ರಲ್ಲಿ ವಿಚಾರಣೆ ಆರಂಭಗೊಳ್ಳುತ್ತಿದ್ದಂತೇ, ವಕ್ಬೋ ಬೋರ್ಡ್ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಿದರು. ಈದ್ಗಾ ಮೈದಾನವು ವಕ್ಫ್ ಬೋರ್ಡ್ ಆಸ್ತಿ ಎಂಬುದಾಗಿ ವಾದಿಸಿದರು.